ಹಳೆಯಂಗಡಿ: ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಹಳೆಯಂಗಡಿಯ ನಾರಾಯಣ ಸನಿಲ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಮೂಲ್ಕಿ ಸೀಮೆ ಅರಮನೆಯ ದುಗ್ಗಣ್ಣ ಸಾವಂತರು ನೆರವೇರಿಸಿದರು.
ಶಿಕ್ಷಣದ ಮೂಲಕ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳಿಗೆ ತಿಳಿಹೇಳುವ ಕಾರ್ಯ ನಡೆಯಬೇಕು. ಇಂತಹ ಶಿಬಿರಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಲಿದೆ ಎಂದರು.
ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ., ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ, ಪಿ.ಡಿ.ಓ ಮುತ್ತಪ್ಪ ಡವಲಗಿ, ನಾರಾಯಣ ಸನಿಲ್ ಸರಕಾರಿ ಪದವಿಪೂರ್ವ ಕಾಲೇಜು ಹಳೆಯಂಗಡಿ ಪ್ರಾಂಶುಪಾಲರಾದ ಪ್ರೊ ಜಯಶ್ರೀ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮೋಹನದಾಸ ಸುವರ್ಣ, ಗೌತಮ್ ಜೈನ್, ರಂಗ ಕಲಾವಿದ ಪ್ರದೀಪ್, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಿಶಾಂತ್ ಮುಂತಾದವರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಡಾ. ಶೇಷಪ್ಪ ಕೆ ಸ್ವಾಗತಿಸಿ, ಯೋಜನಾಧಿಕಾರಿ ಅರುಣಾ ಕುಮಾರಿ ವಂದಿಸಿದರು. ಕಾರ್ತಿಕ್ ನಿರೂಪಿಸಿದರು.