Saturday, October 19, 2024
Saturday, October 19, 2024

ಡಾ. ಜಿ. ಶಂಕರ್ ಸ.ಮ.ಪ್ರ.ದ.ಕಾಲೇಜು ಅಜ್ಜರಕಾಡು: ಎನ್.ಎಸ್.ಎಸ್. ವಿಶೇಷ ಶಿಬಿರದ ಉದ್ಘಾಟನೆ

ಡಾ. ಜಿ. ಶಂಕರ್ ಸ.ಮ.ಪ್ರ.ದ.ಕಾಲೇಜು ಅಜ್ಜರಕಾಡು: ಎನ್.ಎಸ್.ಎಸ್. ವಿಶೇಷ ಶಿಬಿರದ ಉದ್ಘಾಟನೆ

Date:

ಉಡುಪಿ, ಆ. 29: ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಅಜ್ಜರಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಸ್ ಎಲ್ ಬೋಜೇಗೌಡ , ನಗರಸಭಾ ಪೌರಾಯುಕ್ತರಾದ ರಾಯಪ್ಪ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಸರಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಉಷಾಕಿರಣ್, ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಯೋಜಕರಾದ ಪ್ರೊ. ಸೋಜನ್ ಕೆ ಜಿ., ಭಾಗವಹಿಸಿದ್ದರು.

ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮ ಅಧಿಕಾರಿಗಳಾದ ಡಾ. ರಾಜೇಂದ್ರ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಅಧಿಕಾರಿ ರಮ್ಯಾ ವಿ ಉಪಸ್ಥಿತರಿದ್ದರು. ಮಯೂರಿ ಸ್ವಾಗತಿಸಿ, ಸಿಂಚನ ವಂದಿಸಿದರು. ಗೀತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!