Monday, January 20, 2025
Monday, January 20, 2025

ಯುವ ಜನತೆಯನ್ನು ಯಶಸ್ವಿ ಸ್ವ-ಉದ್ಯೋಗಿಗಳನ್ನಾಗಿ ಮಾಡಿ: ಅಪರ ಜಿಲ್ಲಾಧಿಕಾರಿ

ಯುವ ಜನತೆಯನ್ನು ಯಶಸ್ವಿ ಸ್ವ-ಉದ್ಯೋಗಿಗಳನ್ನಾಗಿ ಮಾಡಿ: ಅಪರ ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೆಹರು ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಜನರು ಪದವಿ ನಂತರ ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲು ಅವಕಾಶ ನೀಡದಂತೆ ಅವರು ಪದವಿ ಅಂತಿಮ ವರ್ಷದಲ್ಲಿ ಇರುವಾಗಲೇ ಪದವಿ ನಂತರ ಅವರು ಕೈಗೊಳ್ಳಬಹುದಾದ ಸ್ವ ಉದ್ಯೋಗಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಿ. ಈ ಕಾರ್ಯಕ್ರಮಗಳಿಗೆ ಲೀಡ್‌ ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳು ನೀಡುವ ವಿವಿಧ ಬಗೆಯ ಸಾಲಗಳು, ಸಬ್ಸಿಡಿ ಮೊತ್ತ ಮುಂತಾದವುಗಳ ಬಗ್ಗೆ ಸಮಗ್ರ ವಿವರಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಎಂದರು.

ಬ್ಯಾಂಕುಗಳು ಮಾತ್ರವಲ್ಲದೇ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಯುವಜನತೆಗೆ ಉದ್ಯೋಗ ಪ್ರಾರಂಭಿಸಲು ಇರುವ ಯೋಜನೆಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ ಆ ಮೂಲಕ ಜಿಲ್ಲೆಯ ಯುವಜನತೆ ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಸುಸ್ಥಿರವಾಗಿ ಅಭಿವೃದ್ದಿ ಹೊಂದುವಂತೆ ಯೋಜನೆ ರೂಪಿಸಿ, ಕೇಂದ್ರ ಸರ್ಕಾರ ಸ್ಟಾರ್ಟ್ಅಪ್‌ಗಳನ್ನು ಆರಂಭಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಈ ಬಗ್ಗೆ ಮಾಹಿತಿ ನೀಡಿ, ಆತ್ಮ ನಿರ್ಭರ ಯೋಜನೆಯಡಿ ಸಹ ಅನೇಕ ಉದ್ದಿಮೆ ಆರಂಭಿಸಲು ಅವಕಾಶಗಳಿದ್ದು ಈ ಬಗ್ಗೆಯೂ ಯುವ ಜನತೆಗೆ ಮಾಹಿತಿ ನೀಡಿ ಎಂದರು.

ಜಿಲ್ಲೆಯ ಯುವ ಶಕ್ತಿ, ಜಿಲ್ಲೆಯ ಅಭಿವೃದ್ದಿಗೆ ಸಮರ್ಪಕವಾಗಿ ಬಳಕೆಯಾಗುವ ಕುರಿತಂತೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಯೋಜನೆಗಳನ್ನು ರೂಪಿಸಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನೆರವಾಗುವ ಕುರಿತಂತೆ ಯುವ ಜನತೆಗೆ ಮತ್ತು ಯುವ ಸಂಘಗಳಿಗೆ ತರಬೇತಿ ನೀಡಿ, ಗಾಂಧೀ ಜಯಂತಿಯಂದು ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಯುವ ಜನತೆಯಿಂದ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿ, ಜಲಶಕ್ತಿ ಅಭಿಯಾನ, ನಶಾ ಮುಕ್ತ ಭಾರತ ಮುಂತಾದ ಕಾರ್ಯಕ್ರಮಗಳಲ್ಲಿ ಯುವಜನತೆಯನ್ನು ಸೇರ್ಪಡೆ ಮಾಡಿಕೊಳ್ಳಿ ಎಂದು ಸದಾಶಿವ ಪ್ರಭು ಹೇಳಿದರು.

ಜಿಲ್ಲೆಯ ಯುವಕ ಸಂಘಗಳು ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ನೆರವಾಗಿದ್ದು, ಮಾಸ್ಕ್ಗಳ ವಿತರಣೆ, ಅಶಕ್ತರಿಗೆ ಆಹಾರ ವಿತರಣೆ ಕಾರ್ಯಕ್ರಮಗಳನ್ನು ನಡೆಸಿದ್ದು, ಸ್ವಯಂ ಸೇವಕರಾಗಿ ಸಹ ಹಲವು ಕಾರ್ಯಗಳನ್ನು ಮಾಡಿದ್ದಾರೆ. ಈಗಾಗಲೇ 180 ಮಂದಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ತರಬೇತಿ ನೀಡಿದ್ದು, ಇವರು ಯಾವುದೇ ಸಂದರ್ಭದಲ್ಲಿ ಜಿಲ್ಲಾಡಳಿತದ ನೆರವಿಗೆ ಸಿದ್ದರಾಗಿದ್ದಾರೆ. ಈ ಬಾರಿಯ ಕ್ರಿಯಾ ಯೋಜನೆಯಲ್ಲಿ ಆತ್ಮನಿರ್ಭರ ಯೋಜನೆಯ ಬಗ್ಗೆ, ಬ್ಯಾಂಕ್ ಮಿತ್ರರಾಗಿ ಕಾರ್ಯನಿರ್ವಹಿಸುವ ಬಗ್ಗೆ, ಗ್ರಾಮ ಸ್ವಚ್ಛತೆ, ಕೌಶಲ್ಯ ಮತ್ತು ಸಂವಹನ, ಫಿಟ್ ಇಂಡಿಯಾ ಕುರಿತ ವಿವಿಧ ತರಬೇತಿ ಮುಂತಾದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ವಿಲ್ಪೆçಡ್ ಡಿಸೋಜಾ ಹೇಳಿದರು.

ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಕ್ರಿಯಾ ಯೋಜನೆಯ ವಿವರ ನೀಡಿದರು. ಸಭೆಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!