Monday, October 12, 2026
Monday, October 12, 2026

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ: ಯಶ್ಪಾಲ್ ಸುವರ್ಣ

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ: ಯಶ್ಪಾಲ್ ಸುವರ್ಣ

Date:

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಲಕ್ಷ್ಮಣ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವಂತೆ ಮನವಿ ಮಾಡಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಬೆಂಗಳೂರಿನ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಬೇಡಿಕೆ, ಜ್ವಲಂತ ಸಮಸ್ಯೆಗಳು ಹಾಗೂ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು, ಆಯೋಗದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!