Sunday, September 22, 2024
Sunday, September 22, 2024

ಕೆ.ಎಂ.ಸಿ. ಮಣಿಪಾಲ- ಅಂಗಾಂಗದಾನ ಜಾಗೃತಿ ವಾಕಥಾನ್

ಕೆ.ಎಂ.ಸಿ. ಮಣಿಪಾಲ- ಅಂಗಾಂಗದಾನ ಜಾಗೃತಿ ವಾಕಥಾನ್

Date:

ಮಣಿಪಾಲ: ಭಾರತದಲ್ಲಿ, ನವೆಂಬರ್ 27 ರಂದು ರಾಷ್ಟ್ರೀಯ ಅಂಗಾಗದಾನ ದಿನವನ್ನಾಗಿ ಆಚರಿಸಲಾಗುತ್ತದೆ. ಇದರ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಮೋಹನ್ ಫೌಂಡೇಶನ್ ಸಹಯೋಗದೊಂದಿಗೆ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ ವಾಕಥಾನ್ ಅನ್ನು ಆಯೋಜಿಸಿತ್ತು.

ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್.ಬಲ್ಲಾಲ್ ಮತ್ತು ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ.)ಎಂ ಡಿ ವೆಂಕಟೇಶ್ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದರು.

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿ ಸಿ ಜಿ ಮುತ್ತಣ್ಣ, ಕೆಎಂಸಿ ಡೀನ್ ಡಾ. ಶರತ್‌ಕುಮಾರ್ ರಾವ್, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು.

ಡಾ. ಎಚ್.ಎಸ್.ಬಲ್ಲಾಲ್ ಅವರು ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾಕಥಾನ್ ಆಯೋಜಿಸಿದ್ದಕ್ಕಾಗಿ ಶ್ಲಾಘಿಸಿದರು. ಡಾ. ಎಂ ಡಿ ವೆಂಕಟೇಶ್ ಅವರು ಮಾತನಾಡುತ್ತಾ, ಲಕ್ಷಾಂತರ ಜನರು ಅಂಗಾಂಗಕ್ಕಾಗಿ ಕಾಯುತ್ತಿದ್ದಾರೆ ಆದರೆ ಅರಿವಿನ ಕೊರತೆಯಿಂದ ಪಡೆಯಲಾಗುತ್ತಿಲ್ಲ.

ಮೋಹನ್ ಫೌಂಡೇಶನ್ ನೋಂದಣಿಯಿಂದ ಹಿಡಿದು ಅಂಗಾಂಗ ಕಸಿ ತನಕ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು. ಡಾ. ಅವಿನಾಶ್ ಶೆಟ್ಟಿ ಸ್ವಾಗತಿಸಿ ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಚಾವ್ಳ ಅವಲೋಕನ ನೀಡಿದರು.

ಮಾಹೆ ಮಣಿಪಾಲದ ಎದುರಿನಿಂದ ಆರಂಭಗೊಂಡ ವಾಕಥಾನ್ ಟೈಗರ್ ವೃತ್ತ, ಎಂಐಟಿ ವೃತ್ತ ಮತ್ತೆ ಟೈಗರ್ ವೃತ್ತ ಮತ್ತು ಸಿಂಡಿಕೇಟ್ ವೃತ್ತದ ಮೂಲಕ ಸಾಗಿ ಮಾಹೆ ಮಣಿಪಾಲದಲ್ಲಿ ಕೊನೆಗೊಂಡಿತು. ವೈದ್ಯರು, ವಿದ್ಯಾರ್ಥಿಗಳು, ಮೋಹನ್ ಫೌಂಡೇಶನ್ ಸಿಬ್ಬಂದಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ 1000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!