ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 50 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವೇರಿಜಿಡ್ಡ ಸಾಧು ಪೂಜಾರಿಯವರ ಮನೆ ಬಳಿ 20 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಅ.ವ. ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಅನಂತಪದ್ಮನಾಭ ಕಿಣಿ, ಮೌಂಟ್ ರೋಸರಿ ಚರ್ಚ್ ಧರ್ಮಗುರುಗಳಾದ ಲೆಸ್ಲಿ ಡಿಸೋಜ, ಮಿಲಾಗ್ರಿಸ್ ಚರ್ಚ್ ಧರ್ಮಗುರುಗಳಾದ ವಲೇರಿಯನ್ ಮೆಂಡೋನ್ಸಾ, ಪೆರಂಪಳ್ಳಿ ಚರ್ಚ್ ಇದರ ರೋಮಿಯೋ ಲೂಯಿಸ್ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ್ ಪೂಜಾರಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯ ದಿನಕರ್ ಬಾಬು, ಸ್ಥಳೀಯರಾದ ಸಾಧು ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು ಮೊದಲಾದವರು ಉಪಸ್ಥಿತರಿದ್ದರು.