ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಿಟ್ಟೂರು ವಾರ್ಡಿನಲ್ಲಿ ಸುಮಾರು 13 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ನಿಟ್ಟೂರು ಆಡ್ಕದಕಟ್ಟೆ 1ನೇ ಅಡ್ಡ ರಸ್ತೆ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.
ರೆಡ್ ಕ್ರಾಸ್ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ವೈ. ಹರಿಶ್ಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸಿ ನೇಜಿ ನೆಡುವ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಬಾಲಕೃಷ್ಣ ಶೆಟ್ಟಿ, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಸುಭೇದಾ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಮಹಾಬಲ ಶೆಟ್ಟಿ, ರಂಜನ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ ಮುಂತಾದವರು ಉಪಸ್ಥಿತರಿದ್ದರು.