Sunday, February 8, 2026
Sunday, February 8, 2026

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

Date:

ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ ಎಂದು ಯುವವಾಹಿನಿ(ರಿ.) ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು.

ಅವರು ಯುವವಾಹಿನಿ(ರಿ.) ಯಡ್ತಾಡಿ ಘಟಕದ ವತಿಯಿಂದ ಗುಲಾಬಿ ಪೂಜಾರ್ತಿ ಅವರ ಮನೆ ವಠಾರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಂದಿನ ಮಕ್ಕಳೇ ಮುಂದಿನ ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಗಳು. ಅವರನ್ನು ಸುಂದರ ಶಿಲ್ಪಿಗಳನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಾರ್ಕೂರು ಸ್ವಾಗತ್ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು.

ನಡೂರು ಬ್ರಿಕ್ಸ್ನ ಮಾಲಕರಾದ ಸಂದೀಪ್ ಪೂಜಾರಿ, ಯುವವಾಹಿನಿಯ ಕಾರ್ಯದರ್ಶಿ ಅಜಿತ್ ಪೂಜಾರಿ, ಸಾಂಸ್ಕೃತಿಕ ನಿರ್ದೇಶಕರಾದ ಪ್ರತಿಮಾ ರಮೇಶ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಟೋಟ ಸ್ಪರ್ಧೆಗಳು ಜರಗಿದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!