ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕೇಸ್ಟಲಿನೋ ಕಾಲೋನಿಯಿಂದ ಕೊಂಗೂರು ರಸ್ತೆಯ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಈ ವಾರ್ಡಿನ ಕಾರ್ಪೋರೇಟರ್ ಹಾಗೂ ಸ್ಥಳೀಯ ನಿವಾಸಿಗಳ ಮನವಿ ಮೇರೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 10 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಕೇಸ್ಟಲಿನೋ ಕಾಲೋನಿಯಿಂದ ಕೊಂಗೂರು ಸಂಪರ್ಕ ರಸ್ತೆಯ ಅಭಿವೃದ್ಧಿಯಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಶಾಸಕ ಕಾಮತ್ ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಂದೀಪ್ ಗರೋಡಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಅಜಯ್ ಕುಲಶೇಖರ, ನರ್ಮದ ರೈ, ತೇಜಸ್, ಭರತ್, ಗಣೇಶ್ ಹೆಬ್ಬಾರ್, ವಿನಯ್ ಮಹಾಕಾಳಿ, ಗ್ರೇಷನ್ ಡಿಸೋಜ, ಜಯಕೀರ್ತಿ, ಮಹೇಶ್ ಮುಂತಾದವರು ಉಪಸ್ಥಿತರಿದ್ದರು.