Thursday, December 12, 2024
Thursday, December 12, 2024

ಪಂಡಿತ್ ಎಂ ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

ಪಂಡಿತ್ ಎಂ ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

Date:

ವಿದ್ಯಾಗಿರಿ, ಡಿ.12: ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು. ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.

ಅದಕ್ಕೂ ಮೊದಲು, ಕಲೆ-ಸಂಸ್ಕೃತಿಯ ಸಮ್ಮಿಲನದ ಸ್ವರೂಪದಂತೆ ಅಲಂಕೃತ ಗೊಂಡ ವಿರಾಸತ್‌ನ ಬಯಲು ರಂಗಮಂದಿರದ ಬೃಹತ್ ವೇದಿಕೆಗೆ ಪಂಡಿತ್ ವೆಂಕಟೇಶ್ ಕುಮಾರ್ ಅವರನ್ನು ಸಾಂಪ್ರದಾಯಿಕ ಗೌರವದ ಅಪ್ಸರೆಯರ ಜೊತೆಯಾದ ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಕರೆತರಲಾಯಿತು. ವೇದಿಕೆಯ ಗೌರವ ಪೀಠದಲ್ಲಿ ಕುಳ್ಳಿರಿಸಿ, ಆರತಿ ಬೆಳಗಿ ಹಾರ ಹಾಕಿ ಗೌರವಿಸಲಾಯಿತು. ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕ ಗೌರವ ನೀಡಲಾಯಿತು. ‘ಸ ಎಂದರೆ ಸಂಗೀತ ಸಾಗರ.. ಆರತಿಯು…’ ಹಾಡಿನ ಮೂಲಕ ಅಭಿವಂದನೆ ಸಲ್ಲಿಸಲಾಯಿತು. ಹೂ ಹಾರ, ಶಾಲು, ಹಣ್ಣು-ಹಂಪಲು, ಪ್ರಶಸ್ತಿ ಫಲಕ, ಸ್ಮರಣಿಕೆ ಸಹಿತ ಒಂದು ಲಕ್ಷ ರೂಪಾಯಿಯ ಪುರಸ್ಕಾರ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಆರಂಭದಲ್ಲಿ ದೀಪ ಪ್ರಜ್ವಲನ ಮಾಡಲಾಯಿತು. ಬೆಂಗಳೂರಿನ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಕರ್ಣ ಬೆಳಗೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಎಲ್. ಎಚ್. ಮಂಜುನಾಥ್, ಪ್ರಮುಖರಾದ ನರೇಂದ್ರ ಎಲ್. ನಾಯಕ್, ಉದ್ಯಮಿ ಶ್ರೀಪತಿ ಭಟ್ ಇದ್ದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಉಡುಪಿ, ಡಿ.12: ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ...

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ...
error: Content is protected !!