ಶ್ರೀ ಪುತ್ತಿಗೆ ಮಠದ ಆಡಳಿತದ, ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿಯ ಶ್ರೀ ಅನಂತಪದ್ಮನಾಭ ದೇವಾಲಯದ ನವೀಕರಣದ ಪ್ರಥಮ ಹಂತ ಶಿಲಾಮಯ ಗರ್ಭಗೃಹ, ಶಿಲಾಮಯ ತೀರ್ಥ ಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ, ಶ್ರೀ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ನಡೆಯುವುದರ ಮೂಲಕ ಸಂಪನ್ನ ಗೊಂಡಿತು.
ಪುತ್ತಿಗೆ ಶ್ರೀಪಾದರ ಉಪಸ್ಥಿತಿಯಲ್ಲಿ ವೇ. ಮೂ. ಪುತ್ತೂರು ಹಯವದನ ತಂತ್ರಿ ಹಾಗೂ ಪಂಜ ಭಾಸ್ಕರ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಸಾಂಗವಾಗಿ ಸರಳವಾಗಿ ಸಂಪನ್ನಗೊಂಡಿತು. ಎರಡನೇ ಹಂತದ ನವೀಕರಣ ಕಾಮಗಾರಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ಕೋವಿಡ್-19ರ ಮಾರ್ಗಸೂಚಿಯಂತೆ ಕಾರ್ಯಕ್ರಮಗಳನ್ನು ಶಾಸ್ತ್ರೀಯವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು.