Monday, January 20, 2025
Monday, January 20, 2025

ಇಂದ್ರಾಳಿ ಬಳಿ ಹೆದ್ದಾರಿ ದುರಸ್ತಿಗೆ ನಾಗರಿಕ ಸಮಿತಿ ಆಗ್ರಹ

ಇಂದ್ರಾಳಿ ಬಳಿ ಹೆದ್ದಾರಿ ದುರಸ್ತಿಗೆ ನಾಗರಿಕ ಸಮಿತಿ ಆಗ್ರಹ

Date:

ಉಡುಪಿಯಿಂದ ಮಣಿಪಾಲ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿ ರೈಲು ಸೇತುವೆ ಬಳಿ ಹೆದ್ದಾರಿ ಮೂಲ ಸ್ವರೂಪವನ್ನು ಕಳೆದುಕೊಂಡಿದೆ. ಹೊಂಡ ಗುಂಡಿಗಳು ಬಿದ್ದು, ಕೃತಕ ಈಜುಕೊಳ ನಿರ್ಮಾಣಗೊಂಡಿವೆ. ಅಪಘಾತ ವಲಯವಾಗಿ ಮಾರ್ಪಟ್ಟಿದ್ದು, ಬೈಕು ಸವಾರರು ಹೊಂಡದಲ್ಲಿ ಎಡವಿ ಬಿದ್ದಿರುವ ಬಹಳ ಘಟನೆಗಳು ಇಲ್ಲಿ ನಡೆದಿರುವುದು ಕಂಡುಬಂದಿದೆ. ಪಾದಚಾರಿಗಳಂತೂ ನಡೆದು ಸಾಗುವಂತಿಲ್ಲ, ಮಳೆಯಿಂದ ಹೊಂಡದಲ್ಲಿ ಸಂಗ್ರವಾಗಿರುವ ಕೆಸರು ನೀರು ವಾಹನಗಳ ಚಕ್ರದ ಚಲನೆಗೆ, ಪಾದಚಾರಿಗಳ ಮೈಮೇಲೆ ಎರಚುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತವು ತಕ್ಷಣವಾಗಿ ಹೆದ್ದಾರಿ ದುರಸ್ತಿಗೊಳಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ. ತಡವರಿಸಿದರೆ ಸಂಘ ಸಂಸ್ಥೆಗಳ ನೆರವಿನೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟಿಸುವುದಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಹೇಳಿದ್ದಾರೆ.

ಪ್ರಮುಖ ಹೆದ್ದಾರಿ ಇದಾಗಿರುವುದರಿಂದ ಇರುವೆ ಸಾಲಿನಂತೆ ಇಲ್ಲಿ ಲಘು- ಘನ ವಾಹನಗಳ ಸಂಚಾರದ ದಟ್ಟಣೆ ಇಲ್ಲಿರುತ್ತದೆ. ಜೀವರಕ್ಷಕ ಅಂಬುಲೆನ್ಸ್ ವಾಹನಗಳು ಇಲ್ಲಿ ಆಮೆ ನಡಿಗೆಯಲ್ಲಿ ಸಂಚರಿಸಬೇಕಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಕ್ಲಪ್ತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಲು ಅಸಾಧ್ಯತೆ ಎದುರಾಗಿದೆ. ಇಂದ್ರಾಳಿ ಪರಿಸರದಲ್ಲಿ ಹೆದ್ದಾರಿಯುದ್ದಕ್ಕೂ ದಾರಿದೀಪದ ವ್ಯವಸ್ಥೆಯೂ ಇಲ್ಲ. ಕಳ್ಳಕಾಕರ ಭಯವು ಇಲ್ಲಿ ಉದ್ಭವವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!