Tuesday, July 28, 2026
Tuesday, July 28, 2026

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ದೇಶಭಕ್ತಿ ಗೀತೆ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ದೇಶಭಕ್ತಿ ಗೀತೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರು ಅರ್ಪಿಸುವ ದೇಶಭಕ್ತಿ ಗೀತೆ ಕಾರ್ಯಕ್ರಮಕ್ಕೆ ಉಡುಪಿಯ ಅದಿತಿ ಆರ್ಟ್ ಗ್ಯಾಲರಿಯಲ್ಲಿ ಖ್ಯಾತ ಮೂಳೆ ರೋಗ ತಜ್ಞ ಡಾ| ಕಿರಣ್ ಆಚಾರ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಗಸ್ಟ್ ಪ್ರಥಮ ವಾರದಲ್ಲಿ Samskruthi Vishwa ಯುಟ್ಯೂಬ್ ಚಾನೆಲ್ ಹಾಗೂ ಆಗಸ್ಟ್ 15ರಂದು ಮಾಧ್ಯಮ ಸಹಕಾರ ನೀಡಿದ ‘ಯು ಚಾನಲ್’ ನಲ್ಲಿ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಯುವ ಬಳಗದ ಅಧ್ಯಕ್ಷ ಮಹೇಶ್ ಮಲ್ಪೆ, ಸದಸ್ಯರಾದ ಸುಮಿತ್ರಾ ಕೆರೆಮಠ, ಸಂಚಾಲಕ ರವಿರಾಜ್ ಎಚ್. ಪಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!