Saturday, August 29, 2026
Saturday, August 29, 2026

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ: ಯಶ್ಪಾಲ್ ಸುವರ್ಣ

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ: ಯಶ್ಪಾಲ್ ಸುವರ್ಣ

Date:

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಅವರು ವೈಯಕ್ತಿಕವಾಗಿ ಕೊರೊನಾ ಸೇನಾನಿಗಳಾಗಿ ದುಡಿಯುತ್ತಿರುವ ಕಾಪು ಪುರಸಭೆಯ 40 ಮಂದಿ ಪೌರ ಕಾರ್ಮಿಕರಿಗೆ ಸುಮಾರು 60 ಸಾವಿರ ರೂಪಾಯಿ ವೆಚ್ಚದಲ್ಲಿ ಪಡಿತರ ಕಿಟ್‌ಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆಯೂ ಪೌರ ಕಾರ್ಮಿಕರ ಸೇವೆ ಅನನ್ಯವಾಗಿದೆ. ಕಾಪು ಪಟ್ಟಣವು ಸ್ವಚ್ಛವಾಗಿ, ಪುರಸಭೆ ವ್ಯಾಪ್ತಿಯ ನಾಗರಿಕರು ಸ್ವಚ್ಛ ಗಾಳಿಯನ್ನು ಸೇವಿಸುವಲ್ಲಿ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯವಾಗಿದೆ. ಅವರ ಸೇವೆಯನ್ನು ಗುರುತಿಸಿ, ಕುಟುಂಬವು ಲಾಕ್‌ಡೌನ್ ಸಂದರ್ಭದಲ್ಲಿ ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಪೂರಕವಾಗಿ ಪಡಿತರ ಕಿಟ್‌ಗಳನ್ನು ಒದಗಿಸಲಾಗುತ್ತಿದೆ ಎಂದರು.

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಪುರಸಭೆಯ ಅಧಿಕಾರಿ ಬಾಲೇಶ್, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ವಿಜಯ ಕರ್ಕೇರ, ಸುರೇಶ್ ದೇವಾಡಿಗ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಬಿಜೆಪಿ ಮುಖಂಡರಾದ ಸುಮಾ ಯು. ಶೆಟ್ಟಿ, ಮಾಲಿನಿ ಶೆಟ್ಟಿ, ಗಣೇಶ್ ಕುಮಾರ್ ಮಟ್ಟು, ರತ್ನಾಕರ ಶೆಟ್ಟಿ, ಪ್ರವೀಣ ಕುಮಾರ್, ಯತೀಶ್ ಕೋಟ್ಯಾನ್ ಮಟ್ಟು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!