Sunday, August 30, 2026
Sunday, August 30, 2026

ಪೇಜಾವರ ಶ್ರೀಗಳ ಪದ್ಮವಿಭೂಷಣ ಪ್ರಶಸ್ತಿಯ ಸ್ವಾಗತ ಸಮಾರಂಭ

ಪೇಜಾವರ ಶ್ರೀಗಳ ಪದ್ಮವಿಭೂಷಣ ಪ್ರಶಸ್ತಿಯ ಸ್ವಾಗತ ಸಮಾರಂಭ

Date:

ಉಡುಪಿ: ಭಾರತ ಸರ್ಕಾರದಿಂದ ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಪದ್ಮವಿಭೂಷಣ ಪ್ರಶಸ್ತಿಯನ್ನು ಇಂದು ಉಡುಪಿಯಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.

ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ, ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತಂದು ಕೃಷ್ಣ ದೇವರಿಗೆ ಅರ್ಪಿಸಿ, ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತಂದು ಅಲ್ಲಿ ಗುರುಗಳ ಪೀಠದಲ್ಲಿ ಇಡಲಾಯಿತು. ಬಳಿಕ ಪೇಜಾವರ ಮಠದ ಮುಂಭಾಗದಲ್ಲಿ ಸಭೆ ನಡೆಯಿತು.

ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ಯಾಮಲಾ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!