Friday, July 24, 2026
Friday, July 24, 2026

ಮೇವಿ ಮಿರಾಂದ ಅವರಿಗೆ ಪಿಹೆಚ್.ಡಿ

ಮೇವಿ ಮಿರಾಂದ ಅವರಿಗೆ ಪಿಹೆಚ್.ಡಿ

Date:

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಮೇವಿ ಮಿರಾಂದ ಅವರು ತಮಿಳುನಾಡಿನ ಭಾರತಿಯಾರ್  ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿರುವ ’ಸ್ಟ್ರೆಸ್ ಮ್ಯಾನೇಜ್ಮೆಂಟ್ ಎಮಂಗ್ ವುಮೆನ್ ಎಂಪ್ಲಾಯೀಸ್ ಆಫ್ ಪಬ್ಲಿಕ್ ಸೆಕ್ಟರ್ ಇನ್ಶೂರೆನ್ಸ್ ಕಂಪನೀಸ್: ಎ ಸ್ಟಡೀ ವಿಥ್ ರೆಫರೆನ್ಸ್ ಟು ಕೋಸ್ಟಲ್ ಕರ್ನಾಟಕ’ ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಅವರು ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂ.ಕಾಂ. ಪದವಿ ಹಾಗೂ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿರುತ್ತಾರೆ.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಭಟ್ಕಳ ಇಲ್ಲಿ ಉಪನ್ಯಾಸಕ ಸೇವೆಯನ್ನು ಪ್ರಾರಂಭಿಸಿ ಪ್ರಸ್ತುತ ತೆಂಕನಿಡಿಯೂರು ಕಾಲೇಜಿನ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ರಾಷ್ಟ್ರಮಟ್ಟದ ಹಾಗೂ ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!