Sunday, November 24, 2024
Sunday, November 24, 2024

ಮಂಗಳೂರು ರೋಡ್‌ ಶೋ: ಕರಾವಳಿ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು ರೋಡ್‌ ಶೋ: ಕರಾವಳಿ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Date:

ಮಂಗಳೂರು, ಏ.15: ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ರೋಡ್ ಶೋ ಚಿತ್ರಗಳೊಂದಿಗೆ ಬರೆದಿದ್ದಾರೆ.

ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ. ಕಳೆದ ದಶಕದಲ್ಲಿ ನಮ್ಮ ಸರ್ಕಾರ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ.

ಸಾರಿಗೆ, ಬಂದರು ಅಭಿವೃದ್ಧಿ, ಮೀನುಗಾರಿಕೆ ಮತ್ತು ಮಹಿಳಾ ಮೀನುಗಾರರ ಸಬಲೀಕರಣ, ಇಂಧನ, ಆರೋಗ್ಯ ಮತ್ತು ಇತರೆ ವಲಯಗಳನ್ನು ಕೇಂದ್ರೀಕರಿಸಿ ಕೆಲಸ ಮಾಡಲಾಗಿದೆ. ಇಲ್ಲಿನ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳ ಮೇಲಿನ ಒತ್ತು ಪ್ರಯೋಜನಕಾರಿಯಾಗಿದೆ. ಇತ್ತೀಚೆಗೆ ನಾನು ಉದ್ಘಾಟಿಸಿದ ಮತ್ತು ಶಿಲಾನ್ಯಾಸ ನೆರವೇರಿಸಿದ ಕೆಲಸಗಳಿಂದ ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ಪುಷ್ಟಿ ದೊರೆಯಲಿದೆ. ಕೊಚ್ಚಿ – ಮಂಗಳೂರು ಪೈಪ್‌ ಲೈನ್‌ ಯೋಜನೆಯು ಸಹ ಇದರಲ್ಲಿ ಸೇರಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಂದರು ವಲಯಕ್ಕೆ ಸಂಬಂಧಿಸಿದಂತೆ ಮೂಲ ಸೌಕರ್ಯವನ್ನು ಆಧುನೀಕರಣಗೊಳಿಸಲಾಗುವುದು. ನಮ್ಮ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮವಾದ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ.

ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ. ಇದೇ ರೀತಿ ನಾವು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡಬೇಕಾಗಿದ್ದು, ಇದರಿಂದ ಕರ್ನಾಟಕದ ಈ ಭಾಗವನ್ನು ಹೆಚ್ಚಿನ ಜನ ನೋಡಲು ಸಹಕಾರಿಯಾಗಲಿದೆ. ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ ‘ಸುಗಮ ಜೀವನ’ ಕಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ.

ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ. ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!