ಉಡುಪಿ: ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ.ಜೆ.ಎ.ವೈ) ಯನ್ನು ಹೊಸದಾಗಿ ಆರಂಭಿಸಿದ್ದು, ಈ ಯೋಜನೆಯಡಿ ಯಾವುದೇ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ವೆಚ್ಚಗಳಿಗಾಗಿ ಬಿ.ಪಿ.ಎಲ್ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಹಾಗೂ ಎ.ಪಿ.ಎಲ್ ಕಾರ್ಡ್ದಾರರು 1.5 ಲಕ್ಷ ರೂ. ವರೆಗೆ ವಿಮಾ ಸೇವೆಯ ಜೊತೆಗೆ ಫಲಾನುಭವಿಗಳ ಚಿಕಿತ್ಸೆಯ ಮಾಹಿತಿಯೂ ಸಹ ದೇಶದ ಯಾವುದೇ ಭಾಗದಲ್ಲಿ ಆನ್ಲೈನ್ ಮೂಲಕ ಪಡೆಯಬಹುದಾಗಿದೆ.
ಯೋಜನೆಯ ನೋಂದಣಿಯು ಉಚಿತವಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಪ್ರತಿ, ಆಧಾರ್ ಕಾರ್ಡ್ಗೆ ಜೋಡಣೆಯಾಗಿರುವ ಮೊಬೈಲ್ ನಂಬರ್ ಹಾಗೂ ರೇಷನ್ ಕಾರ್ಡ್ ಪ್ರತಿಯನ್ನು ಸಲ್ಲಿಸಿ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ.ಜೆ.ಎ.ವೈ) ಗೆ ನೋಂದಾಯಿಸಿಕೊಂಡು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.