Home ಸುದ್ಧಿಗಳು ಪ್ರಾದೇಶಿಕ ಪೋಷಣ್ ಪಕ್ವಾಡ ಸಮಾರೋಪ ಕಾರ್ಯಕ್ರಮ

ಪೋಷಣ್ ಪಕ್ವಾಡ ಸಮಾರೋಪ ಕಾರ್ಯಕ್ರಮ

298
0

ಉಡುಪಿ: ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠವಾದ ಮಕ್ಕಳು ದೇಶದ ಆಸ್ತಿ. ಗರ್ಭಿಣಿ ಬಾಣಂತಿ ಹಾಗೂ ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.

ಅವರು ಆತ್ರಾಡಿ ಗ್ರಾಮ ಪಂಚಾಯತ್‌ನ ಹೆಚ್ ಮಹೀಮ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಲಯನ್ಸ್ ಕ್ಲಬ್ ಉಡುಪಿ, ಚೇತನಾ, ಸಂಜೀವಿನಿ ಹಾಗೂ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ ಮತ್ತು ಗ್ರಾಮ ಪಂಚಾಯತ್ ಆತ್ರಾಡಿ ಇವರ ಸಹಯೋಗದಲ್ಲಿ ನಡೆದ ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ-2022 ರ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆತ್ರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ರೂಪಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಅಂಗನವಾಡಿ ಮೂಲಕ ಹಲವು ಸೌಲಭ್ಯಗಳು ಲಭ್ಯವಿದ್ದು, ಇವುಗಳ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ, ಪೋಷಣ್ ಅಭಿಯಾನ ಹಾಗೂ ಇಲಾಖಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪೋಷಣ್ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಪೌಷ್ಠಿಕ ಆಹಾರಗಳ ಪ್ರಾತ್ಯಕ್ಷಿಕೆ ನಡೆಯಿತು.

ಕಾರ್ಯಕ್ರಮದಲ್ಲಿ ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರಸಿಂಹ ನಾಯಕ್. ಆತ್ರಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಎನ್.ಆರ್.ಎಲ್.ಎಮ್‌ನ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಲಯನ್ಸ್ ಕ್ಲಬ್ ಉಡುಪಿ ಚೇತನಾದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸಂಜೀವಿನಿ ಗ್ರಾಮ ಒಕ್ಕೂಟದ ಅಧ್ಯಕ್ಷೆ ಆಶಾ ಎಮ್. ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆತ್ರಾಡಿ ಗ್ರಾಮ ಪಂಚಾಯತ್‌ನ ಪಿಡಿಓ ಸಂತೋಷ್ ಜೋಗಿ ಸ್ವಾಗತಿಸಿ, ನಿರೂಪಿಸಿದರು, ವಲಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.