Monday, July 27, 2026
Monday, July 27, 2026

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

Date:

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ 15 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಕೊಳಲಗಿರಿ ಚರ್ಚ್ ಧರ್ಮ ಗುರುಗಳಾದ ಪ್ರಕಾಶ್ ಅನಿಲ್ ಕಾಸ್ತಲಿನೊ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂಮಿಗೆ ಹಾಲನ್ನು ಅರ್ಪಿಸಿ ಬಳಿಕ ನೇಜಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾ ಆಚಾರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಪ್ರತಾಪ್ ಹೆಗ್ಡೆ ಮಾರಾಳಿ, ಮಹೇಶ್ ಠಾಕೂರ್, ಬಿರ್ತಿ ರಾಜೇಶ್ ಶೆಟ್ಟಿ, ಕೊಳಲಗಿರಿ ವಾರ್ಡ್ ಸದಸ್ಯ ಅಶ್ವಿನ್, ಸತೀಶ್, ರಾಜಶ್ರೀ, ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!