ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ಆರಂಭಗೊಂಡಿದೆ.
ಸಾರ್ವಜನಿಕ ಸಮಾವೇಶ ನಗರದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿದ್ದು, ಸಿದ್ಧತೆ ಆರಂಭವಾಗಿದೆ.
ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ. ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಇಂದು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.