Sunday, January 19, 2025
Sunday, January 19, 2025

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಶಾಸಕ ರಘುಪತಿ ಭಟ್

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಶಾಸಕ ರಘುಪತಿ ಭಟ್

Date:

ಮಳೆಗಾಲದ ಸಂದರ್ಭದಲ್ಲಿ ಮನೆಯ ಪರಿಸರದಲ್ಲಿ ಕಲ್ಮಶವಾಗಿರುವ ನೀರು ಶೇಖರಣೆಗೊಂಡು ಮಲೇರಿಯಾ, ಡೆಂಗ್ಯೂ, ಚಿಕನ್‌ಗೂನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಶುಕ್ರವಾರ ಅಂಬಲಪಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಸೌಧದಲ್ಲಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂಬಲಪಾಡಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ, ಮಲೇರಿಯಾ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ಕೋವಿಡ್ ಸಂಕಷ್ಟದ ನಡುವೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಶೇಖರಣೆ ಆಗದಂತೆ ನೋಡಿಕೊಳ್ಳಬೇಕು. ಹೆಚ್ಚು ದಿನಗಳ ಕಾಲ ನೀರನ್ನು ಶೇಖರಿಸಿಡುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ನಗರ ಪ್ರದೇಶದಲ್ಲಿ ನೀರು ನಿಲ್ಲುವ ಜಾಗದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಹಡಿಲು ಭೂಮಿ ಕೃಷಿ ಯೋಜನೆಯನ್ನು ಕೈಗೊಂಡಾಗ, ಗದ್ದೆಗಳಲ್ಲಿ ಹೆಚ್ಚು ನೀರು ಶೇಖರಣೆಯಾಗುವ ಜಾಗಗಳಲ್ಲಿ, ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಿದ್ದು, ಈ ರೀತಿ ಕಾರ್ಯಗಳನ್ನು ಕೈಗೊಂಡಾಗ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದರು. ಜನಸಂಖ್ಯೆ ಎಂಬುದು ಒಂದು ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದ ಅವರು, ಒಂದು ಬೇಕು ಎರಡು ಸಾಕು ಎಂಬ ಘೋಷಣೆಯನ್ನು ಪಾಲಿಸಿದರೆ ಜನಸಂಖ್ಯೆ ಏರಿಕೆಯನ್ನು ಕಡಿಮೆಗೊಳಿಸಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಜನಸಂಖ್ಯೆ ಏರಿಕೆಯ ಜೊತೆಜೊತೆಗೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬಡತನ, ಅರ್ಥಿಕತೆ ಹಾಗೂ ಶಿಕ್ಷಣಕ್ಕೆ ಎದುರಾಗುವ ಕಷ್ಟಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದರು.

ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಜನಸಂಖ್ಯೆ ದಿನಾಚರಣೆ, ಮಲೇರಿಯಾ ಹಾಗೂ ಡೆಂಗ್ಯೂ ಮಾಸಾಚರಣೆಯ ಕರಪತ್ರ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್ ಉಪಾಧ್ಯಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!