Thursday, September 24, 2026
Thursday, September 24, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಜು.26: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಿ ಜಗತ್ತಿನ ಮುಂದೆ ಭಾರತವನ್ನು ಬಾಗುವಂತೆ ಮಾಡುವುದೇ ಸಿಜೆಪಿ ಪ್ರತಿಭಟನೆಯ ಉದ್ದೇಶವಾಗಿದೆ. ಧರ್ಮೇಂದ್ರ ಪ್ರಧಾನ್ ಅವರು ದೇಶದ ಹಿತಕ್ಕಾಗಿ ಮತ್ತು ವಿದ್ಯಾರ್ಥಿಗಳ ಹೆಸರಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾದಿ ತಪ್ಪಬಾರದು ಎಂಬ ಕಾರಣಕ್ಕೆ ಪ್ರತಿಷ್ಠೆ ಬಿಟ್ಟು ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಗೆ ಪ್ರಧಾನ್ ರವರ ಕೊಡುಗೆ ಅಪಾರವಾಗಿದೆ. ಹೊಸ ಶಿಕ್ಷಣ ನೀತಿ (ಎನ್.ಇ.ಪಿ) ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಅವರ ಕಾರ್ಯಶೈಲಿ ನಿಜಕ್ಕೂ ಮೆಚ್ಚುವಂತದ್ದು. ಹಿರಿಯ ನಾಯಕರಾಗಿ ಪಕ್ಷ ಸಂಘಟನೆಗೂ ಅವರ ಕೊಡುಗೆ ಮರೆಯಲಾಗದು. ಅವರ ಜೊತೆಗೆ ದೇಶದ ಕೋಟ್ಯಾಂತರ ಕಾರ್ಯಕರ್ತರು ನಿಂತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅವಕಾಶಗಳು ಒದಗಿ ಬರಲೆಂದು ಆಶಿಸುತ್ತೇನೆ. ನೀಟ್ ಪತ್ರಿಕೆ ಸೋರಿಕೆ ಮುಂದಿಟ್ಟುಕೊಂಡು ನಡೆದ ಪ್ರತಿಭಟನೆಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಅಲ್ಲ, ಮೋದಿ ರಾಜೀನಾಮೆ ಎನ್ನುವುದು ಈಗ ಮತ್ತಷ್ಟು ಸ್ಪಷ್ಟವಾಗಿದೆ. ದೇಶದ ನೂತನ ಶಿಕ್ಷಣ ಸಚಿವರಾಗಿ ಆತ್ಮೀಯರು, ಮಾರ್ಗದರ್ಶಕರು, ರಾಜ್ಯದ ಪ್ರಹ್ಲಾದ್ ಜೋಶಿಯವರನ್ನು ನೇಮಕಗೊಳಿಸಲಾಗಿದೆ. ಅವರು ಈ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!