ಉಡುಪಿ: ಜಿಲ್ಲೆಯ ಹಲವೆಡೆ ಇಂದು ಸಂಜೆ ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಉಡುಪಿ, ಮಣಿಪಾಲ, ಬ್ರಹ್ಮಾವರ, ಕೋಟ ಸೇರಿದಂತೆ ಹಲವೆಡೆ ಒಂದು ತಾಸಿಗೂ ಹೆಚ್ಚು ಮಳೆ ಸುರಿದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
