Friday, June 5, 2026
Friday, June 5, 2026

ಅನರ್ಹ ಪಡಿತರ ಚೀಟಿ ಹಿಂತಿರುಗಿಸಲು ಜೂನ್ 30 ಕೊನೆಯ ದಿನ: ಜಿಲ್ಲಾಧಿಕಾರಿ ಜಿ. ಜಗದೀಶ್

ಅನರ್ಹ ಪಡಿತರ ಚೀಟಿ ಹಿಂತಿರುಗಿಸಲು ಜೂನ್ 30 ಕೊನೆಯ ದಿನ: ಜಿಲ್ಲಾಧಿಕಾರಿ ಜಿ. ಜಗದೀಶ್

Date:

ಜಿಲ್ಲೆಯಲ್ಲಿ 2011ರ ಜನಗಣತಿಯಲ್ಲಿ 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯ ಅನ್ನ ಮತ್ತು 1,61,987 ಆದ್ಯತಾ ಸೇರಿ ಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹಾಗೂ 1,05,733 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ನೀಡಲಾಗಿರುತ್ತದೆ.

ವೇತನವನ್ನು ಗಣನೆಗೆ ತೆಗೆದುಕೊಳ್ಳದ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಹಾಗೂ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್ ಹಾಗೂ ವೃತ್ತಿತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್‌ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವಾದ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ (ಬಿಪಿಎಲ್) ಪಡೆಯಲು ಅರ್ಹರಿರುವುದಿಲ್ಲ. 

ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿ, ಆದ್ಯತೇತರ ಪಡಿತರಚೀಟಿಯನ್ನು ಪಡೆದಿರುತ್ತಾರೆ.

ಸರ್ಕಾರ ನಿಗಧಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ಜೂನ್ 30 ರ ಒಳಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆದುಕೊಳ್ಳಬೇಕು.

ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955, ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977 ಹಾಗೂ ಐಪಿಸಿ ಕಲಂಗಳಡಿಯಲ್ಲಿ ಕ್ರಮ ಜರುಗಿಸಿ, ಹಂಚಿಕೆ ಪಡೆದ ಆಹಾರಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!