Sunday, January 19, 2025
Sunday, January 19, 2025

ಪೋಲಿಯೋ ನಿರ್ಮೂಲನೆಗೆ ಸಹಕರಿಸಿ: ಜಿಲ್ಲಾಧಿಕಾರಿ

ಪೋಲಿಯೋ ನಿರ್ಮೂಲನೆಗೆ ಸಹಕರಿಸಿ: ಜಿಲ್ಲಾಧಿಕಾರಿ

Date:

ಉಡುಪಿ: ಎಲ್ಲಾ ಪೋಷಕರು 0-5 ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ವಿಶ್ವದಿಂದ ಪೋಲೀಯೋವನ್ನು ನಿರ್ಮೂಲನೆ ಮಙಡಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು, ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ 2011 ರಿಂದ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ, ಆದರೆ ಪಕ್ಕದ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿದ್ದು, ಆ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೂಲಕ ಹರಡುವ ಸಾಧ್ಯತೆಗಳಿದ್ದು, ಆದ್ದರಿಂದ ಎಲ್ಲಾ ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇಡೀ ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಗುರಿ ಹೊಂದಿದ್ದು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ಮತ್ತು 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ಗಳನ್ನು ತರೆಯಲಾಗಿದೆ.

2794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು, ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳು ಅಗತ್ಯ ಸಹಕಾರ ನೀಡುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸ್ವರ್ಣಲತಾ, ರೋಟರಿ ಅಧ್ಯಕ್ಷ ಸುರೇಶ್ ಶೆಣ್ಯೆ, ಐ.ಕೆ. ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ. ನಾಗಭೂಷಣ ಉಡುಪ ಸ್ವಾಗತಿಸಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!