ಮಂಗಳೂರು: ಡಾ.ಪಿ ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ 2022-23 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಸಭೆ ಶನಿವಾರ ನಡೆಯಿತು. ಪೋಷಕರು ತರಗತಿ ಅಧ್ಯಾಪಕರೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ತಿಳಿದುಕೊಂಡರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಧಾಕರನ್ ಟಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕಾರ್ಯಾಗಾರ ನಡೆಸಿ ಪೋಷಕರಿಗೆ ಮಾಹಿತಿಗಳನ್ನು ನೀಡಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಡಾ. ರವಿಕುಮಾರ ಎಂ ಪಿ ಇವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು.
ಆರು ವರ್ಷಗಳ ಕಾಲ ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷರಾಗಿದ್ದ ಪಾಂಡುರಂಗ ನಾಯಕ್ ರವರ ಸೇವೆಯನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸಿ, ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಬಹುಮುಖ್ಯವಾಗಿದೆ ಎಂದರು.
2022-23 ನೇ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಜಾನ್ ಡಿಸೋಜಾ, ಕಾರ್ಯದರ್ಶಿಯಾಗಿ ಸಾರೂ ನಾಯಕ್ ಹಾಗೂ ಖಜಾಂಚಿಯಾಗಿ ಎ.ಎಂ ಶೇಕ್ ಹೈದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಾಲೇಜಿನ ಸ್ನಾತಕ ವಿಭಾಗದ ಶೈಕ್ಷಣಿಕ ಸಂಯೋಜಕರಾದ ಡಾ. ವಸಂತಿ ಪಿ., ಸ್ನಾತಕೋತ್ತರ ವಿಭಾಗದ ಶೈಕ್ಷಣಿಕ ಸಂಯೋಜಕರಾದ ಡಾ. ನಾಗಪ್ಪ ಗೌಡ ಕೆ ಹಾಗೂ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.
ಡಾ. ರವಿಕುಮಾರ ಎಂ ಪಿ ಸ್ವಾಗತಿಸಿ, ಡಾ. ಸುಧಾಕರನ್ ಟಿ ವಂದಿಸಿದರು. ತೃಪ್ತಿ ನಿರೂಪಿಸಿದರು. ವಿದ್ಯಾರ್ಥಿನಿ ದೀಕ್ಷಾ ಮತ್ತು ತಂಡದವರು ಪ್ರಾರ್ಥಿಸಿದರು.