ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅನೇಕ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಎಕ್ಕೂರು ಕೆ.ಎಚ್.ಬಿ ಲೇಔಟ್ ನಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಈಗಿರುವ ಪಾರ್ಕ್ ಅಭಿವೃದ್ಧಿ ಹಾಗೂ ಹೊಸ ಪಾರ್ಕ್ ನಿರ್ಮಾಣಕ್ಕಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಹೊಂದಿಸಲಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಹಿರಿಯ ನಾಗರಿಕರಿಗೆ ವಾಯುವಿಹಾರ ಸೇರಿದಂತೆ ಮಕ್ಕಳಿಗೂ ಉಪಯೋಗವಾಗುವಂತೆ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಶೋಭಾ ಪೂಜಾರಿ, ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ರೈ, ಭರತ್ ರಾಜ್, ರಾಜೇಶ್, ವಸಂತ್ ಜೆ ಪೂಜಾರಿ, ಕೃಷ್ಣ ಬಂಗೇರ, ಮಂಜುನಾಥ ರೈ, ಶಿವಕುಮಾರ್, ವಸಂತ ರಾವ್, ಪೂರ್ಣಿಮಾ ಪ್ರಮೋದ್, ರಾಘವೇಂದ್ರ ಶೆಟ್ಟಿ, ರಾಮ್ ಪ್ರಸಾದ್, ನಿತ್ಯಾನಂದ ಕೊಕ್ಕಡ, ಸವಿತಾ ವಸಂತ್, ವಿದ್ಯಾ ಶಶಿಧರ್, ಸೀತಮ್ಮ, ಲೋಕೇಶ್ ಕುತ್ತಡ್ಕ, ರೇಖಾ, ಸುಮತಿ ಚಂದ್ರಶೇಖರ್, ಸುಜಾತ, ಭಾಸ್ಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.