ವಿದ್ಯಾಗಿರಿ, ಜೂನ್ 16: ಫುಟ್‌ಬಾಲ್ ಕ್ರೀಡೆಯು ಹಲವು ಆಟಗಾರರಿಗೆ ಜನಪ್ರಿಯತೆ ತಂದುಕೊಟ್ಟಿದ್ದು, ಜಗತ್ತಿನ ಶೇ 30ರಷ್ಟು ಕ್ರೀಡಾ ಆರ್ಥಿಕ ಚಟುವಟಿಕೆಯು ಫುಟ್‌ಬಾಲ್ ಕ್ರೀಡೆಯ ಮೇಲೆ ಅವಲಂಬಿತವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಡಾ. ವಿನಯ್ ಆಳ್ವ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ಆಳ್ವಾಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಉಡುಪಿ ವಲಯ ಅಂತರ ಕಾಲೇಜು ಹಾಗೂ ಅಂತರ ವಲಯ ಮಟ್ಟದ ಪುರುಷರ ಫುಟ್‌ಬಾಲ್ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಫುಟ್‌ಬಾಲ್ ನಮಗೆ ಸಹಕಾರದ ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಈ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕ್ರೀಡಾಕೂಟ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ಮಾತನಾಡಿ, ಫುಟ್‌ಬಾಲ್ ಆಟದಲ್ಲಿ ಸ್ಪರ್ಧೆಯು ಹೆಚ್ಚಾಗಿರುತ್ತದೆ. ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಿ ಇನ್ನಷ್ಟು ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಅಗತ್ಯ ಎಂದರು. ಕ್ರೀಡಾಕೂಟದ ವೀಕ್ಷಕ ಬಿಜು ಜಾಕೋಬ್ ಇದ್ದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್. ಸ್ವಾಗತಿಸಿ, ವಿದ್ಯಾರ್ಥಿನಿ ಲಲಿತಾ ನಿರೂಪಿಸಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಸಹ ಪ್ರಾಧ್ಯಾಪಕ ಉದಯ್ ಕುಮಾರ್ ವಂದಿಸಿದರು.
ಆಳ್ವಾಸ್ ಚಾಂಪಿಯನ್: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಉಡುಪಿ ವಲಯದ ಪುರುಷರ ಫುಟ್‌ಬಾಲ್ ಫೈನಲ್‌ನಲ್ಲಿ ಉಡುಪಿ ಕಾಲೇಜ್ ಆಫ್ ಪ್ರೊಫೆಷನಲ್ ತಂಡವನ್ನು ಸೋಲಿಸಿದ ಆಳ್ವಾಸ್ ಕಾಲೇಜು ಚಾಂಪಿಯನ್‌ಶಿಪ್ ಪ್ರಶಸ್ತಿ ಲಭಿಸಿತು.