ವಿದ್ಯಾಗಿರಿ, ಜೂನ್ 21: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಇದ್ದರು.
ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಗಳ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಯೋಗಾಭ್ಯಾಸ ಮಾಡಿದರು. ಸುಮಾರು ಒಂದು ಗಂಟೆಗಳ ಕಾಲ ಪ್ರಾಣಾಯಾಮ, ಆಸನ, ಧ್ಯಾನ, ವಿಶ್ರಾಂತಿ ಯೋಗಗಳನ್ನು ಮಾಡಿದರು. ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಯೋಗಾಭ್ಯಾಸ ನಡೆಯಿತು. ಈ ಹಿಂದೆ ಯೋಗಾಥಾನ್ ಹಾಗೂ ಜಾಂಬೂರಿ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗಾಭ್ಯಾಸ ಮಾಡಿ ಗಮನ ಸೆಳೆದಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.