Tuesday, January 21, 2025
Tuesday, January 21, 2025

ಕ್ರಿಯಾಶೀಲ ಬದುಕಿನ ತಂತ್ರವೇ ಆತ್ಮಹತ್ಯೆ ತಡೆಯುವ ಮಂತ್ರ

ಕ್ರಿಯಾಶೀಲ ಬದುಕಿನ ತಂತ್ರವೇ ಆತ್ಮಹತ್ಯೆ ತಡೆಯುವ ಮಂತ್ರ

Date:

ಮಂಗಳೂರು, ಸೆ. 10: ಇಂದಿನ ಯುವಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಉದ್ದೇಶ, ಗುರಿಯನ್ನು ಈಡೇರಿಸಿಕೊಳ್ಳುವ ಧಾವಂತದಲ್ಲಿ ಕೆಲವೊಮ್ಮೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಅಮೂಲ್ಯ ಬದುಕನ್ನು ಕೊನೆಗೊಳಿಸುವ ಯೋಚನೆಗೆ ಒಳಗಾಗುತ್ತಾರೆ. ತನ್ನ ಕೆಲಸದಲ್ಲಿ ಆದ ಸೋಲನ್ನೆ ಜೀವನದ ಸೋಲು ಎಂಬುದಾಗಿ ಭಾವಿಸಿಕೊಂಡು ಅತಂತ್ರ ಮನಸ್ಥಿತಿಯನ್ನು ನಿರ್ಮಿಸಿಕೊಂಡು ಆತ್ಮಹತ್ಯೆಯ ಕಡೆ ಹೆಜ್ಜೆ ಹಾಕುತ್ತಿರುವುದು ಆರೋಗ್ಯಪೂರ್ಣ ವ್ಯಕ್ತಿತ್ವದ ಲಕ್ಷಣವಲ್ಲ. ಇದರಿಂದ ಹೊರಗೆ ಬರಬೇಕಾದರೆ ನಾವು ಸುವಿಚಾರಗಳನ್ನು ಬೆಳೆಸಿಕೊಂಡು ಸೃಜನಶೀಲ ಯೋಜನೆಗಳನ್ನು ಬದುಕಿನಲ್ಲಿ ಹಾಕಿ ಕೊಳ್ಳಬೇಕು. ಆತ್ಮಹತ್ಯೆಯೇ ಎಲ್ಲಾ ಸಮಸ್ಯೆಗಳ ಪರಿಹಾರವಲ್ಲ ಎಂಬ ಸತ್ಯವನ್ನು ಅರಿತುಕೊಳ್ಳಬೇಕು. ಎಂದು ಕೆನರಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಎಂ ಪದ್ಮನಾಭ ಪೈ ಹೇಳಿದರು.
ಅವರು ಶನಿವಾರ ಕೆನರಾ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಜಾಥವನ್ನು ಉದ್ದೇಶಿಸಿ ಮಾತನಾಡಿದರು.

ಕೆನರಾ ಶಿಕ್ಷಣ ಸಂಸ್ಥೆಯಿಂದ ಹೊರಟ ಜಾಥಾ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ನವಭಾರತ ವೃತ್ತ, ಬಂಟ್ಸ್ ಹಾಸ್ಟೆಲ್ ವೃತ್ತ, ಮಹಾತ್ಮ ಗಾಂಧಿ ರಸ್ತೆಯಾಗಿ ಕೆನರಾ ಪದವಿ ಕಾಲೇಜು ಆವರಣದಲ್ಲಿ ಸಮಾವೇಶಗೊಂಡಿತು. ಕೆನರಾ ಹೈಸ್ಕೂಲ್ ಸಿಬಿಎಸ್ ಇಲ್ಲಿಯ ಆಪ್ತ ಸಮಾಲೋಚಕಿ ಮಮತಾ ಭಂಡಾರಿ ಆತ್ಮಹತ್ಯೆ ತಡೆ ದಿನದ ಮಹತ್ವದ ಕುರಿತು ಮಾತನಾಡುತ್ತಾ, ಬಾಹ್ಯ ಮತ್ತು ಆಂತರಿಕ ಪ್ರಲೋಭನೆಗಳು ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತಿವೆ. ಅವುಗಳನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಿಕೊಂಡಾಗ ಈ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಆತ್ಮಹತ್ಯೆಯನ್ನು ಹೊರ ತಾದ ಶ್ರೇಷ್ಠ ಜೀವನ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ, ಮುಖ್ಯವಾಗಿ ಯುವ ಸಮುದಾಯದಲ್ಲಿ ಅರಿವನ್ನು ಮೂಡಿಸಬೇಕಾಗಿದೆ. ಬೀದಿ ನಾಟಕಗಳು, ಜಾಗೃತಿ ಕಾರ್ಯಕ್ರಮಗಳು, ಸೃಜನಶೀಲ ಚಟುವಟಿಕೆಗಳಿಂದ ಆತ್ಮಹತ್ಯೆಯನ್ನು ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಹೆಚ್ಚು ಚಿಂತಿತರಾಗಬೇಕು ಎಂದು ಹೇಳಿದರು.

ಕೆನರಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನಸಿಕ ಒತ್ತಡಗಳು, ನಿರುದ್ಯೋಗ, ವರದಕ್ಷಿಣೆ ಪ್ರಚೋದಿತ ಆತ್ಮಹತ್ಯೆ ಇವುಗಳ ಕಾರಣಗಳು ಮತ್ತು ಪರಿಹಾರ ಕ್ರಮಗಳ ಕುರಿತು ಬೀದಿ ನಾಟಕ ಪ್ರದರ್ಶನಗೊಂಡಿತು. ಮಾನಸಿಕ ಸ್ವಾಸ್ಥ್ಯವನ್ನು ಬೆಳೆಸಿಕೊಳ್ಳಲು ಪೂರಕ ವಾತಾವರಣ ರೂಪಿಸುವ ಬಗ್ಗೆ, ಒತ್ತಡಗಳು ಬಂದಾಗ ಅವುಗಳನ್ನು ನಿಭಾಯಿಸುವ, ಆತ್ಮಹತ್ಯೆಯನ್ನು ಹೊರತುಪಡಿಸಿದ ಪರಿಹಾರ ಕ್ರಮಗಳ ಬಗೆಗಿನ ಚಿಂತನೆ ಮಾಡುವ ದೃಷ್ಟಿಕೋನದ ಬಗ್ಗೆ ಬೀದಿ ನಾಟಕದ ಪಾತ್ರಗಳ ಮೂಲಕ ಅರಿವು ಮೂಡಿಸಲಾಯಿತು.

ಕೆನರಾ ಆಡಳಿತ ಮಂಡಳಿಯ ಸಹಖಜಾಂಚಿ ಜಗನ್ನಾಥ್ ಕಾಮತ್, ಜಂಟಿ ಕಾರ್ಯದರ್ಶಿಗಳಾದ ಸುರೇಶ್ ಕಾಮತ್ ಹಾಗೂ ಗೋಪಾಲಕೃಷ್ಣ ಶೆಣೈ, ಕೆನರಾ ವಿಕಾಸ ಕಾಲೇಜಿನ ಸಂಯೋಜಕರಾದ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ಪದವಿ ಕಾಲೇಜಿನ ಮ್ಯಾನೇಜರ್ ಶಿವಾನಂದ ಶೆಣೈ, ಆಡಳಿತ ಮಂಡಳಿಯ ಸದಸ್ಯರಾದ ನರೇಶ್ ಶೆಣೈ, ಕೆನರಾ ಆಂಗ್ಲ ಪ್ರಾಥಮಿಕ ಶಾಲೆ ಹಾಗೂ ಕೆನರಾ ಹೈಸ್ಕೂಲ್ ಉರ್ವಾ ಇಲ್ಲಿಯ ಮ್ಯಾನೇಜರ್ ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ಡಾ. ದೀಪ್ತಿ ನಾಯಕ್, ಪಿ,ಆರ್.ಓ ಉಜ್ವಲ್ ಮಲ್ಯ, ಕೆನರಾ ಸಹೋದರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನ್ ಮೇರಿ ಕಾರ್ಯಕ್ರಮವ ನಿರೂಪಿಸಿ ಕಾರ್ಯಕ್ರಮದ ಔಚಿತ್ಯದ ಕುರಿತು ಮಾತನಾಡಿದರು. ಕೆನರಾ ಕಾಲೇಜಿನ ಉಪನ್ಯಾಸಕಿ ರಕ್ಷಿತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!