ಮಂಗಳೂರು, ಸೆ.15: ಮಂಗಳೂರು ರಥಬೀದಿಯ ಡಾ. ಪಿ ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಶುಕ್ರವಾರ ದ್ವಿತೀಯ ವರ್ಷದ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೆಲ್‌ನೆಸ್ ಮತ್ತು ಧ್ಯಾನ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾದ ಶೈಲ ಕಾಮತ್ ಮತ್ತು ಅಮಿತ ಸುಧೀರ್ ಅವರು ವಿದ್ಯಾರ್ಥಿಗಳು ಪ್ರತಿದಿನ ಧ್ಯಾನವನ್ನು ಮಾಡುವುದರ ಮೂಲಕ ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯನ್ನು ಹಾಗೂ ದೈನಂದಿನ ಚಟುವಟಿಕೆಗಳಲ್ಲಿ ಯಾವುದೇ ಒತ್ತಡವಿಲ್ಲದೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು. ಬಳಿಕ ಎಲ್ಲಾ ವಿದ್ಯಾಥಿಗಳಿಗೆ ಧ್ಯಾನದ ಪ್ರಾಯೋಗಿಕ ಅನುಭವವನ್ನು ಮಾಡಿಸಿದರು.
ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಶುಭ ಕೆ.ಹೆಚ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಅಪರ್ಣ ಆಳ್ವ ವಂದಿಸಿದರು. ದ್ವಿತೀಯ ಗಣಕ ವಿಜ್ಞಾನ ವಿಭಾಗದ 150 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಬಹಿಸಿದರು.