Friday, October 16, 2026
Friday, October 16, 2026

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ: ಶಾಸಕ ಕಾಮತ್ ಆಗ್ರಹ

ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ: ಶಾಸಕ ಕಾಮತ್ ಆಗ್ರಹ

Date:

ಉಡುಪಿ, ಅ.14: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು, ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು.

ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!