ಮಂಗಳೂರು, ಅ.20: ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರ್ಬ್ ಎನರ್ಜಿ ಅವರು ವಿನ್ಯಾಸಗೊಳಿಸಿದ 140 ಕೆ.ವಿ. ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಒರ್ಬ್ ಸೋಲಾರ್ ಎನರ್ಜಿಯ ಸಿಇಓ ಡೇಮಿಯನ್ ಮಿಲ್ಲರ್ ಮಾತನಾಡಿ, ಗ್ರಾಮೀಣ ಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಸೋಲಾರ್ ಆಸಕ್ತಿ ಇದೀಗ ಸಾರ್ವತ್ರಿಕವಾಗಿದೆ. ಲಕ್ಷಾಂತರ ಸೋಲಾರ್ ಯುನಿಟ್ ಗಳು ಕ್ರಾಂತಿಕಾರಕ ಬೆಳವಣಿಗೆಗೆ ಕಾರಣವಾಗಿದ್ದು ಸಾಮೂಹಿಕ ಸಂಘಟನೆಗಳ ಮೂಲಕ ಜತೆಗೂಡಿ ಇನ್ನಷ್ಟು ಬೆಳೆಯಬಹುದು ಎಂದರು.
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್, ಆಡಳಿತ ಮಂಡಳಿ ಸದಸ್ಯರು, ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ, ಪ್ರಾಂಶುಪಾಲ ಡಾ. ನಾಗೇಶ್ ಹೆಚ್. ಆರ್., ಮತ್ತಿತರರು ಉಪಸ್ಥಿತರಿದ್ದರು. ಕ್ಯಾರೆಲ್ ಡಿಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.