Sunday, November 24, 2024
Sunday, November 24, 2024

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಚಾರುವಸಂತ ಪ್ರಸ್ತುತಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಚಾರುವಸಂತ ಪ್ರಸ್ತುತಿ

Date:

ಮೂಡುಬಿದಿರೆ, ಅ.30: ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ಚಾರುವಸಂತ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ.ಪ. ನಾಗರಾಜಯ್ಯ (ಹಂಪನಾ) ಹೇಳಿದರು. ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಪ್ರಸ್ತುತಪಡಿಸಿದ ತಮ್ಮ (ಡಾ.ಹಂ.ಪ.ನಾಗರಾಜಯ್ಯ) ಚಾರುವಸಂತ ನಾಟಕವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ ಬಯಸುತ್ತೇನೆ ನಿಮ್ಮ ಆಮ್ಲಜನಕ ಎಂದು ಭಾವುಕರಾದರು. ಭಾರತೀಯ ಮಾತ್ರವಲ್ಲ ಎಲ್ಲ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ
ಇರುತ್ತದೆ. ಏಳುಬೀಳುಗಳ ಜೀವನದ ಕಥನವೇ ಚಾರುವಸಂತ ಎಂದರು. ಎಲ್ಲ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ, ಈರ್ಷೆ ಬಿಟ್ಟು ಬಿಡಬೇಕು. ಪರಿಸರ ಸಂರಕ್ಷಿಸಬೇಕು ಎಂಬ ಸಂದೇಶವಿದೆ ಎಂದರು. ಮೋಹನ ಆಳ್ವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯು ಕೃತಿಯಾಗುತ್ತದೆ ಎಂದು ಅವರು ಶ್ಲಾಘಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಕೃತಿಗಳು ಹೆಚ್ಚು ಮಾತನಾಡಬೇಕು. ವ್ಯಕ್ತಿಗಳಲ್ಲ ಎಂದರು. ಪರಿಸರ ರಕ್ಷಣೆಯ ಮಹತ್ವ ನಾಟಕದಲ್ಲಿದೆ. ಧರ್ಮ, ಜಾತಿ ಮುಖ್ಯವಲ್ಲ, ಸೌಹಾರ್ದತೆ ಮುಖ್ಯ. ಸುಖ- ದುಖ ಸಮಾನವಾಗಿ ಸ್ವೀಕರಿಸಿ ಎಂಬ ಸಂದೇಶ ನಾಟಕದಲ್ಲಿದೆ ಎಂದರು. ಹಂಪನಾ ಅವರು ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷತೆ ವಹಿಸಿದ್ದರು. ಅವರ ಪತ್ನಿ ಕಮಲಾ ಹಂಪನಾ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ
ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರ ಕುಟುಂಬದ ಜೊತೆ ನಮಗೆಲ್ಲ ಅವಿನಾಭಾವ ನಂಟಿದ ಎಂದು ನೆನಪಿಸಿಕೊಂಡರು. ನಾಟಕ ಎಂದರೆ ನಿರ್ದೇಶಕನ ಕೈಚಳಕ. ಜೀವನ್ ರಾಂ ಸುಳ್ಯ ಅವರು ನಾಟಕವನ್ನು ರಂಗರೂಪಕ್ಕೆ ತಂದ ಬೆರಗನ್ನು ನೋಡಿದರೆ ಹಂಪನಾ ಮೂಕವಿಸ್ಮಿತರಾಗುವರು ಎಂದು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, 2003 ರಲ್ಲಿ ಹಂಪನಾ ಬರೆದ ಚಾರುವಸಂತವನ್ನು ಡಾ.ಎಂ.ಮೋಹನ ಆಳ್ವರ ಆಶಯದಂತೆ ನಿರ್ದೇಶಿಸಲಾಗಿದೆ. ರಂಗಕರ್ಮಿ ಡಾ. ನಾ.ದಾ. ಶೆಟ್ಟಿ ರಂಗರೂಪ ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಈ ಪಯಣವು ಮೂಡುಬಿದಿರೆ ಮೂಲಕ ರಾಜ್ಯದಾದ್ಯಂತ ತಿರುಗಾಟ ನಡೆಸಲಿದೆ ಎಂದರು.

ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಇದ್ದರು. ಉಪನ್ಯಾಸಕ ವೇಣುಗೋಪಾಲ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಚಾರುವಸಂತ ನಾಟಕವು ಅ.31 ರಂದು ಕಲಾಮಂದಿರ ಮೈಸೂರು, ನ.2 ರಂದು ರವೀಂದ್ರ ಕಲಾಕ್ಷೇತ್ರ ಬೆಂಗಳೂರು, ನ.4 ಡಾ.ಎಚ್.ಎನ್.ಕಲಾಮಂದಿರ ಗೌರಿಬಿದನೂರು, ನ.6 ಗುಬ್ಬಿ ವೀರಣ್ಣ ಕಲಾಮಂದಿರ ತುಮಕೂರು, ನ.8 ರಂದು ತ.ರಾ.ಸು. ರಂಗಮಂದಿರ ಚಿತ್ರದುರ್ಗ, ನ.10 ರಂದು ಮಲ್ಲಿಕಾರ್ಜುನ ರಂಗಮಂದಿರ ದಾವಣಗೆರೆ, ನ.12 ಡಾ.ಪಾಟೀಲ ಪುಟ್ಟಪ್ಪ ಸಭಾಭವನ ಧಾರವಾಡ ಹಾಗೂ ನ.15 ರಂದು ರಂಗಮನೆ ಸುಳ್ಯದಲ್ಲಿ ಪ್ರದರ್ಶನಗೊಳ್ಳಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...
error: Content is protected !!