Home ಸುದ್ಧಿಗಳು ಪ್ರಾದೇಶಿಕ ಕಡಿಯಾಳಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಕಡಿಯಾಳಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

433
0

ಬೆಳ್ತಂಗಡಿ: ಮೇ ತಿಂಗಳಲ್ಲಿ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ ಸೋಮವಾರ ಭೇಟಿಯಾಗಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ, ದೇವಳದ ಅರ್ಚಕರಾದ ರಾಧಾಕೃಷ್ಣ ಉಪಾಧ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಕಾಮತ್ ಕಡಿಯಾಳಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಸತೀಶ್ ಕುಲಾಲ್, ರಾಕೇಶ್ ಜೋಗಿ, ಅಶ್ವಥ್ ದೇವಾಡಿಗ, ಸಂತೋಷ್ ಕಿಣಿ, ಚೇತನ್ ಕುಮಾರ್ ಕಡಿಯಾಳಿ, ಸದಾನಂದ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.