Tuesday, January 21, 2025
Tuesday, January 21, 2025

ಬಾನ್ಸುರಿ, ವಯೋಲಿನ್, ಸ್ವರ ದಿಗ್ಗಜರಿಗೆ ‘ವಿರಾಸತ್ ಪ್ರಶಸ್ತಿ’ ಗೌರವ

ಬಾನ್ಸುರಿ, ವಯೋಲಿನ್, ಸ್ವರ ದಿಗ್ಗಜರಿಗೆ ‘ವಿರಾಸತ್ ಪ್ರಶಸ್ತಿ’ ಗೌರವ

Date:

ವಿದ್ಯಾಗಿರಿ (ಮೂಡುಬಿದಿರೆ) ಡಿ.17: ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ, ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರಿಗೆ ಭಾನುವಾರ ‘ಆಳ್ವಾಸ್ ವಿರಾಸತ್-2023’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದ ವಿಶಾಲ ವೈಭವದ ವೇದಿಕೆಯಲ್ಲಿ ಆಸೀನರಾದ ಮೂವರು ಸಾಧಕರಿಗೆ ಅವರದ್ದೇ ರಾಗ ಸಂಯೋಜನೆಯ ವಯೋಲಿನ್, ಬಾನ್ಸುರಿ ಹಾಗೂ ಸಂಗೀತದ(ಜೈ ಹೋ) ಮೂಲಕ ಅಭಿಮಾನದ ಪ್ರೀತಿಯನ್ನು ಧಾರೆ ಎರೆಯಲಾಯಿತು. ಶಾಲು, ಹೂಹಾರ, ಸ್ಮರಣಿಕೆ, ಪ್ರಶಸ್ತಿ ಪತ್ರದ ಜೊತೆಗೆ 1 ಲಕ್ಷ ರೂಪಾಯಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪನ್ನೀರು, ತಿಲಕ, ಪುಷ್ಪಾರ್ಚನೆ ಹಾಗೂ ಆರತಿ ಮೂಲಕ ಗೌರವಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡವು ಸ್ವರ ಗಾನದ ಆರತಿ, ಗಾನಸುಧೆ ಹರಿಸಿತು.

ಪ್ರಶಸ್ತಿಗೆ ಪ್ರತಿಕ್ರಿಯಿಸಿ ಮಾತನಾಡಿದ ಮೈಸೂರು ಮಂಜುನಾಥ, ಲೋಕದ ಸಮಸ್ತ ಸಂಭ್ರಮ ಮೂಡುಬಿದಿರೆಗೆ ಆಳ್ವರು ತಂದಿದ್ದಾರೆ ಎಂದು ದೇವೇಂದ್ರ ನಾಚುವ ಹಾಗೆ ವಿರಾಸತ್ ಭಾಸವಾಗುತ್ತಿದೆ. ಅವರು ಕೇವಲ ವೈಭವ ಸೃಷ್ಟಿಸಿಲ್ಲ. ಅದನ್ನು ಜನರಿಗೆ ಸಮರ್ಪಿಸಿ ಶ್ರೇಷ್ಠರಾಗಿದ್ದಾರೆ. ಮೂಡುಬಿದಿರೆ ಎಂಬ ಸಾಮಾನ್ಯ ಊರನ್ನು ವಿಶ್ವ ಭೂಪಟಕ್ಕೆ ಸೇರಿಸಿದ್ದಾರೆ ಎಂದು ಬಣ್ಣಿಸಿದರು. ಕಲೆಗೆ ಗೌರವ ಹಾಗೂ ವೈಭವವನ್ನು ತಿಳಿಯಲು ಜಗತ್ತಿಗೆ ಇಂದು ಮೂಡುಬಿದಿರೆ ಮಾಪಕವಾಗಿದೆ. ಇಲ್ಲಿ ಪಾಲ್ಗೊಳ್ಳಲು ಬಯಸಿದ ಕಲಾವಿದರ ಸಂಖ್ಯೆ ಬಹುದೊಡ್ಡದಿದೆ. ಇಲ್ಲಿ ಇಲ್ಲದಿರುವುದು ಏನು? ಎಂದು ಭಾವುಕರಾದರು. ಕಲೆಯ ಮೂಲ ಉದ್ದೇಶವೇ ಸೌಂದರ್ಯ ಅರಿತು ಆಸ್ವಾದಿಸುವುದು. ಅದನ್ನು ಆಳ್ವರು ಮಾಡುತ್ತಿದ್ದು, ಇಲ್ಲಿ ನೂರಾರು ಕಲಾವಿದರು ಹುಟ್ಟಿಕೊಳ್ಳುತ್ತಾರೆ ಎಂದರು. ಆಳ್ವರು ಸಾಂಸ್ಕೃತಿಕ ರಾಯಭಾರಿ ಹಾಗೂ ವಿರಾಸತ್ ಪ್ರಶಸ್ತಿಯು ರಾಷ್ಟ್ರೀಯ ಪ್ರಶಸ್ತಿಗೂ ಮಿಗಿಲು ಎಂದರು. ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಆಳ್ವರ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ಸ್ವರ್ಗಲೋಕ ಸೃಷ್ಟಿಯಾಗಿದೆ. ಮನಸ್ಸು ಅರಳಿಸುವ ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಆಳ್ವರ ಪರಿಶ್ರಮದ ಫಲ ಇದು. ಆಳ್ವಾಸ್ ವಿರಾಸತ್ ಪ್ರಶಸ್ತಿ ಪದ್ಮಶ್ರೀಗೂ ಮಿಗಿಲು ಎಂದು ಬಣ್ಣಿಸಿದರು.

ಅತಿಥಿಗಳನ್ನು ಬರಮಾಡಿಕೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ವಿರಾಸತ್ ಕೇವಲ ಮನೋರಂಜನಾ ಕಾರ್ಯಕ್ರಮ ಅಲ್ಲ, ದೇಶದ ಕಲೆಯನ್ನು ಗೌರವಿಸುವ ಹಬ್ಬ. ನಾಡಿನಲ್ಲಿ ಕಲೆ ಗೌರವಿಸುವ ಸಂಘಟಕ ಹಾಗೂ ಸೌಂದರ್ಯ ಪ್ರಜ್ಞೆ ಇರುವ ಪ್ರೇಕ್ಷಕ ವರ್ಗ ಬೇಕು. ಭ್ರಷ್ಟತೆ ಎಲ್ಲಿಯೂ ಸೋಂಕ ಬಾರದು ಎಂದರು. ಕೃಷಿಕ, ಯೋಧ, ಕಲಾವಿದರನ್ನು ಗೌರವಿಸುವ ಆಳ್ವಾಸ್, ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ 7 ಮೇಳಗಳನ್ನು ಈ ಬಾರಿ ಸಂಘಟಿಸಿದೆ ಎಂದರು. ನಮ್ಮ ಮನೆಯ ಶ್ರೇಷ್ಠ ಕಲಾವಿದರನ್ನು ಗೌರವಿಸುತ್ತಿದ್ದೇವೆ ಎಂದು ಧನ್ಯತೆ ವ್ಯಕ್ತಪಡಿಸಿದರು.

ಮೂಡುಬಿದಿರೆ ಜೈನ ಮಠದ ಸ್ವಸ್ತಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸಂಸದ ನಾರಾ ಸಿಂಗ್, ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ, ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾರದಾ ವಿದ್ಯಾಲಯದ ಎಂ.ಬಿ.ಪುರಾಣಿಕ್, ಉದ್ಯಮಿ ಶ್ರೀಪತಿ ಭಟ್ ಇದ್ದರು.

ತಾಳ-ವಾದ್ಯ-ಸಂಗೀತ: ವಿಜಯ ಪ್ರಕಾಶ್ ಅವರ ಸ್ವರಮಾಧುರ್ಯ, ಮೈಸೂರು ಮಂಜುನಾಥ ಅವರ ವಯೋಲಿನ್ ವೈಭವ ಹಾಗೂ ಪ್ರವೀಣ್ ಗೋಡ್ಖಿಂಡಿ ಅವರ ಕೊಳಲಿನ ನಾದಕ್ಕೆ ಪ್ರೇಕ್ಷಕರು ತಲೆದೂಗಿದರು. ಆಳ್ವಾಸ್ ವಿರಾಸತ್ ಪ್ರಶಸ್ತಿ ಪುರಸ್ಕೃತ ಮೂವರ ಕಛೇರಿಯು ಅಭಿಮಾನಿಗಳನ್ನು ಸಂಗೀತ ಲೋಕಕ್ಕೆ ಕೊಂಡೊಯ್ದಿತು. ಆರಂಭದಲ್ಲಿ ಹಂಸಧ್ವನಿ ರಾಗದ ಆಲಾಪನೆ ಮೂಲಕ ಕಛೇರಿ ಆರಂಭಗೊಂಡಿತು. ಗೋಡ್ಖಿಂಡಿ ಬಾನ್ಸುರಿಗೆ ಮೈಸೂರು ಮಂಜುನಾಥ್ ಜುಗಲ್ ಬಂಧಿಯಾದರು. ಮುಸ್ಸಂಜೆಯ ಗೋಧೋಳಿ ಲಗ್ನದಲ್ಲಿ ಮನೆ ಮನೆಗಳಲ್ಲಿ ದೀಪ ಬೆಳಗಿದಂತೆ, ಬೆಳಂದಿಗಳು ತುಂಬಿದ ವೇದಿಕೆಯಲ್ಲಿ ಗಣೇಶ ಸ್ತುತಿ ಮೂಲಕ ಹಂಸಧ್ವನಿ ರಾಗದ ವಾತಾಪಿ ಗಣಪತಿಂ ಭಜೇ.. ನಾದ ಹೊನಲಾಯಿತು.

ನಾದಸುಧೆಯ ಏರಿಳಿತವು ಸಭಾಂಗಣದಲ್ಲಿ ಸಂಭ್ರಮದ ಅಲೆಯನ್ನು ಸೃಷ್ಟಿಸಿತು. ಜುಗಲ್ ಬಂಧಿಯು ಉಚ್ಛ್ರಾಯ ಸ್ಥಿತಿಯನ್ನು ಸಿಂಗರಿಸಿದಾಗ, ಎಲ್ಲರಿಗೂ ರೋಮಾಂಚನ. ಆಗ ಸಭಾಂಗಣದಲ್ಲಿ ಚಪ್ಪಾಳೆಯ ಸುರಿಮಳೆ. ಬಳಿಕ ಅವರ ಜೊತೆಗೂಡಿದ ಕರ್ನಾಟಕ ಸಂಗೀತ ಖ್ಯಾತಿಯ ವಿಜಯ ಪ್ರಕಾಶ್, ಉಡುಪಿ ಶ್ರೀಕೃಷ್ಣ ಆರಾಧನೆಯ ಕೃಷ್ಣಾ ನೀ ಬೇಗನೇ ಬಾರೋ.. ಹಾಡಿದರು. ಯಮನ ಕಲ್ಯಾಣಿ ಮಿಶ್ರಛಾಪು ರಾಗದಲ್ಲಿ ಕೃಷ್ಣಾ ಎಂದು ಆಲಾಪನೆ ಆರಂಭಿಸಿದ ವಿಜಯ ಪ್ರಕಾಶ್ ನಾದ ಸುಧೆ ಹರಿಸಿದರು. ತಾಯಿಗೆ ಬಾಯಲ್ಲಿ ಜಗವನ್ನು ತೋರಿದ ಎಂಬ ಸಾಲುಗಳು ಮೂಡುಬಿದಿರೆ ಯಲ್ಲಿ ವಿರಾಸತ್ ದರ್ಶನವನ್ನು ವಿಶ್ಲೇಷಿಸುವಂತೆ ಅಪ್ಯಾಯಮಾನವಾಯಿತು. ಪ್ರವೀಣ್ ಗೋಡ್ಖಿಂಡಿ ಅವರ ರಾಗ ಸಂಯೋಜನೆಯ ಕೃಷ್ಣಾ ಆಲ್ಬಮ್ ನ ಮೋಹನ ರಾಗದ ತುಣುಕೊಂದನ್ನು ಆರಿಸಿಕೊಂಡ ವಿದ್ವಾಂಸ ತ್ರಯರು ನಾದಲೋಕವನ್ನೇ ಸೃಷ್ಟಿಸಿದರು. ನಿಮ್ಮ ಪ್ರೇರಣೆಯಿಂದ ಇದೆಲ್ಲ ಸಾಧ್ಯವಾಗಿದೆ ಎಂದು ವಿಜಯ ಪ್ರಕಾಶ್ ಧನ್ಯತೆ ವ್ಯಕ್ತಪಡಿಸಿದರು.

ಪಿಯಾನೋದಲ್ಲಿ (ಕೀ ಬೋರ್ಡ್) ನಲ್ಲಿ ಪ್ರವೀಣ್ ಡಿ.ರಾವ್, ಮೃದಂಗದಲ್ಲಿ ತುಮಕೂರು ಡಿ. ರವಿಶಂಕರ್, ತಬಲದಲ್ಲಿ ವೇಣುಗೋಪಾಲ ಹಾಗೂ ಡ್ರಮ್ಸ್ ನಲ್ಲಿ ಅರುಣ್ ಕುಮಾರ್ ಸಾಥ್ ನೀಡಿದರು. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿ ಪ್ರಖ್ಯಾತ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!