Friday, October 18, 2024
Friday, October 18, 2024

ರಥಬೀದಿ ಕಾಲೇಜು: ಯುಜಿಸಿ-ನೆಟ್ ಮತ್ತು ಕೆಸೆಟ್ ಪರೀಕ್ಷೆಗಳಿಗೆ ಒಂದು ವಾರದ ವಿಶೇಷ ತರಬೇತಿ ಕಾರ್ಯಕ್ರಮ

ರಥಬೀದಿ ಕಾಲೇಜು: ಯುಜಿಸಿ-ನೆಟ್ ಮತ್ತು ಕೆಸೆಟ್ ಪರೀಕ್ಷೆಗಳಿಗೆ ಒಂದು ವಾರದ ವಿಶೇಷ ತರಬೇತಿ ಕಾರ್ಯಕ್ರಮ

Date:

ಮಂಗಳೂರು, ಡಿ. 18: ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುಜಿಸಿ-ನೆಟ್ ಮತ್ತು ಕೆಸೆಟ್ ಪರೀಕ್ಷೆಗಳಿಗೆ ಒಂದು ವಾರದ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶ ಕಾಲೇಜಿನ ಐಕ್ಯೂಏಸಿ ಸಹಯೋಗದೊಂದಿಗೆ ಆಯೋಜಿಸಿದ್ದು, ಡಿಸೆಂಬರ್ 16 ರವರೆಗೆ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವರಾಮ ಪಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅವರು, ತರಬೇತಿ ಕಾರ್ಯಕ್ರಮದ ಅಗತ್ಯವನ್ನು ವಿವರಿಸಿದರು. ಒಂದು ವಾರದ ತರಬೇತಿ ಕಾರ್ಯಕ್ರಮದಲ್ಲಿ ಮಂಗಳೂರು ಜಂಟಿ ನಿರ್ದೇಶಕ ಕಛೇರಿಯ ವಿಶೇಷಾಧಿಕಾರಿ ದೇವಿಪ್ರಸಾದ್, ಡಾ. ಅಜಯ್ ಅಂಚನ್, ಸ್ಟೀವನ್ ರಾಬರ್ಟ್ ಟೆಲ್ಲಿಸ್, ಲಿಥಿನ್, ಸಂಧ್ಯಾ, ಮೋನಿಶಾ ಶೆಟ್ಟಿ, ಡಾ.ಜ್ಯೋತಿ ಪ್ರವೀಣ್, ಪ್ರಸನ್ನ ಕುಮಾರ್, ಡಾ.ಸೌಮ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಯುಜಿಸಿ-ನೆಟ್ ಮತ್ತು ಕೆಸೆಟ್ ಪರೀಕ್ಷೆಗಳ ವಿವಿಧ ಅಂಶಗಳ ಕುರಿತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸಂಯೋಜಕರಾದ ಡಾ. ಮಾಲತಿ ಕೆ. ತರಬೇತಿ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಸ್ನಾತಕೋತ್ತರ ವಿಭಾಗದ ಶೈಕ್ಷಣಿಕ ಸಲಹೆಗಾರ ಪ್ರೊ.ನಾಗಪ್ಪ ಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಂಯೋಜಕರಾದ ಡಾ.ಜ್ಯೋತಿಪ್ರಿಯಾ, ಸುವರ್ಣಮಾಲಿನಿ, ಡಾ. ನಿತಿನ್ ಚೋಲ್ವೇಕರ್, ಡಾ. ಲೋಕೇಶನಾಥ್, ಅರುಣಾ ಕುಮಾರಿ ಉಪಸ್ಥಿತರಿದ್ದರು. ೧೫೦ ಸ್ನಾತಕೋತ್ತರ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!