Wednesday, February 19, 2025
Wednesday, February 19, 2025

ಗಗನ ಬಿ. ಅವರಿಗೆ ಡಾಕ್ಟರೇಟ್ ಪದವಿ

ಗಗನ ಬಿ. ಅವರಿಗೆ ಡಾಕ್ಟರೇಟ್ ಪದವಿ

Date:

ಮೂಡುಬಿದಿರೆ, ಡಿ.27: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ ಹಾಗೂ ಸಂಶೋಧನಾ ಕೇಂದ್ರದ ಮೊದಲ ಡಾಕ್ಟರೇಟ್ ಪದವೀಧರೆಯಾಗಿ ಗಗನ ಬಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಗಗನ ಬಿ ಮಂಡಿಸಿದ ‘ಸ್ಕ್ರೀನಿಂಗ್ ಆಫ್ ಪೈಟೋಕೆಮಿಕಲ್ ಕಾನ್ಸ್ಟಿಟ್ಯೂಯೆಂಟ್ಸ್ ಆ್ಯಂಡ್ ಇವ್ಯಾಲ್ಯೇವೇಷನ್ ಆಫ್ ಆ್ಯಂಟಿಕ್ಯಾನ್ಸ್ರಸ್ ಪ್ರೋರ್ಪಾಟೀಸ್ ಆಫ್ ಜಿಮ್ನಾಕ್ರಾಂಥೆರಾ ರ‍್ಕೋಹೆರಿಯನಾ (ಹುಕ್. ಎಫ್ ಆ್ಯಂಡ್ ಥಾಮ್ಸ್) ವಾರ್ಬ್’ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.

ಮೂಲತಃ ತರೀಕೆರೆಯವರಾದ ಇವರು ಬಿವಿ ಬಸವರಾಜ್ ಹಾಗೂ ಹೆಚ್‌ಒ ಪ್ರಭಾವತಿ ದಂಪತಿಗಳ ಪುತ್ರಿ. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ ಹಾಗೂ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ರಾಮ ಭಟ್ ಪಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಸಂಶೋಧನೆಯ ಹಂತದಲ್ಲಿ ಇವರು ಮೌಖಿಕವಾಗಿ ಪ್ರಸ್ತುತ ಪಡಿಸಿದ 6 ಅಂತರಾಷ್ಟ್ರೀಯ ಹಾಗೂ ಒಂದು ರಾಷ್ಟ್ರೀಯ ಸಂಶೋಧನಾ ಲೇಖನಗಳಿಗೆ ಅತ್ಯುತ್ತಮ ಪ್ರಸ್ತುತಿಯ ಗೌರವಕ್ಕೆ ಪಾತ್ರವಾಗಿದ್ದು, ಮೂರು ಸಂಶೋಧನಾ ಲೇಖನಗಳು ಪ್ರಕಟಗೊಂಡಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಕ್ರಮ

ಬೆಂಗಳೂರು, ಫೆ.19: ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ಕಿಲ್‌ ಅಟ್‌ ಸ್ಕೂಲ್‌ ಹೆಸರಲ್ಲಿ...

ಮಾರ್ಚ್ 7: ರಾಜ್ಯ ಬಜೆಟ್ ಮಂಡನೆ

ಬೆಂಗಳೂರು, ಫೆ.19: ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ...

ಪಂಚಾಯತ್‌ ರಾಜ್‌ ವಿಕೇಂದ್ರಿಕರಣದ ಸೂಚ್ಯಂಕ: ದೇಶದಲ್ಲೇ ನಂ. 1 ಸ್ಥಾನ ಪಡೆದ ಕರ್ನಾಟಕ

ಬೆಂಗಳೂರು, ಫೆ.19: ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆ ಮಾಡಿದ ಪಂಚಾಯತ್‌ ರಾಜ್‌...

ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬಗಳಿಗೂ ಉಚಿತ ಚಿಕಿತ್ಸೆ

ಬೆಂಗಳೂರು, ಫೆ.19: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್...
error: Content is protected !!