Saturday, October 19, 2024
Saturday, October 19, 2024

ಆಳ್ವಾಸ್ ಕಾಲೇಜಿಗೆ ಸ್ವಾಯತ್ತ (ಅಟೋನೊಮಸ್) ಸ್ಥಾನಮಾನ

ಆಳ್ವಾಸ್ ಕಾಲೇಜಿಗೆ ಸ್ವಾಯತ್ತ (ಅಟೋನೊಮಸ್) ಸ್ಥಾನಮಾನ

Date:

ಮೂಡುಬಿದಿರೆ, ಜ. 3: ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಕಾಲೇಜಿಗೆ 2023-24 ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು
ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು (ಯುಜಿಸಿ) 2023ರ ಮೇ 31 ರಂದು ಮಂಗಳೂರು ವಿಶ್ವವಿದ್ಯಾಲಯಕ್ಕೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಅನ್ವಯ ಮಂಗಳೂರು ವಿಶ್ವವಿದ್ಯಾಲಯವು ವಿದ್ಯಾವಿಷಯಕ ಪರಿಷತ್ ಸಮಾಲೋಚನೆಯೊಂದಿಗೆ ಸಿಂಡಿಕೇಟ್ ಮಾಡಿರುವ ಶಿಫಾರಸ್ಸು ಅನುಸರಿಸಿ ಸ್ವಾಯತ್ತ ಸ್ಥಾನಮಾನವನ್ನು ನೀಡಲು ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣಇಲಾಖೆಯು ಸಹಮತ ಸೂಚಿಸಿ ಆದೇಶಿಸಿದೆ ಎಂದು ತಿಳಿಸಿದರು. ಮೌಲ್ಯಾಧಾರಿತ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ದೊರೆಯುವ ಕಾರಣ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಪದವಿಗಳನ್ನು ಇನ್ನಷ್ಟು ಕಾಲಬದ್ಧ ಹಾಗೂ ಸುಸಂಘಟಿತವಾಗಿ ನಡೆಸಲು ಅವಕಾಶವಾಗಲಿದೆ. ದಾಖಲಾತಿ, ಪರೀಕ್ಷೆ ಹಾಗೂ ಫಲಿತಾಂಶವನ್ನು ಸುಸಜ್ಜಿತವಾಗಿ ನಡೆಸಲು ಸಹಕಾರಿಯಾಗುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಇನ್ನಷ್ಟು ವೇಗ ಸಿಗಲಿದೆ. ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಸುಸಂಘಟಿತವಾಗಿ ಆಯೋಜಿಸಲು ಅನುವು ಮಾಡಿಕೊಡಲಿದೆ.

ವೃತ್ತಿಪರತೆ ಹಾಗೂ ಆಧುನಿಕ ಕೈಗಾರಿಕೆ ಮತ್ತು ಉದ್ಯಮ ವಲಯಕ್ಕೆ ಬೇಕಾದ ಕೌಶಲಭರಿತ ತರಬೇತಿಗೆ ಅವಕಾಶ ಹೆಚ್ಚಲಿದೆ. ಮೂಡುಬಿದಿರೆಯಲ್ಲಿ 1998ರಲ್ಲಿ ಡಾ.ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಕಾಲೇಜನ್ನು ಆರಂಭಿಸಿದ್ದು, ರಜತ ಮಹೋತ್ಸವದ ಹೊಸ್ತಿಲಲ್ಲಿದ್ದು, ಸ್ವಾಯತ್ತತೆ ದೊರೆತಿರುವುದು ಇನ್ನಷ್ಟು ಬಲ ನೀಡಿದೆ. ಈಗಾಗಲೇ ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ರ‍್ಯಾಂಕ್, ಕ್ರೀಡಾ ಮತ್ತು ಸಾಂಸ್ಕೃತಿಕ ವಲಯದಲ್ಲಿ ಗಣನೀಯ ಸಾಧನೆ ಹಾಗೂ ಅತಿಹೆಚ್ಚಿನ ಉದ್ಯೋಗ ಗಳಿಕೆ ಮೂಲಕ ವಿಶಿಷ್ಟ ಸಾಧನೆಯನ್ನು ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!