ಮಂಗಳೂರು, ಜ.13: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳೊಂದಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಬಿ. ನಾಗೇಂದ್ರ ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳು & ಅನುದಾನದ ವಿವರಗಳ ಬಗ್ಗೆ ಚರ್ಚಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಡಾ. ಆನಂದ್ ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಶಶಿಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರರಾದ ಜೆ. ಜೆ. ಪದ್ಮನಾಭ, ಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ್ ಎ., ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.