Monday, November 25, 2024
Monday, November 25, 2024

ಆಳ್ವಾಸ್ ಆವರಣವೇ ಮಿನಿ ಭಾರತ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಆಳ್ವಾಸ್ ಆವರಣವೇ ಮಿನಿ ಭಾರತ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

Date:

ಮೂಡುಬಿದಿರೆ, ಜ.26: ಕಣ್ಣು ಹಾಯಿಸಿದಷ್ಟೂ ಕೇಸರಿ, ಬಿಳಿ, ಹಸಿರು ವರ್ಣ, ಸಾಗರದ ಅಲೆಗಳಂತೆ ಹಾರಾಡಿದ ತ್ರಿವರ್ಣ ಧ್ವಜ, ಬಾನೆತ್ತರಕ್ಕೆ ಚಿಮ್ಮಿದ ತ್ರಿವರ್ಣ ರಂಗಿನ ಚಿತ್ತಾರ, ಉಕ್ಕಿ ಬಂದ ದೇಶಪ್ರೇಮದ ಭಕ್ತಿ, ಮಕ್ಕಳಲ್ಲಿ ಮನೆ ಮಾಡಿದ ಸಂಭ್ರಮ, ಮಾಜಿ ಸೈನಿಕರಿಂದ ಧ್ವಜಕ್ಕೆ ವಂದನೆ, ತ್ರಿವರ್ಣದಲ್ಲಿ ಬರೆದ ‘ಆಳ್ವಾಸ್’ ಅಮೃತ ಕಾಲದದಲ್ಲಿ ಕಂಗೊಳಿಸಿದ ‘ಮಿನಿ ಭಾರತ’. ಗಣರಾಜ್ಯೋತ್ಸವ ಅಮೃತ ಕಾಲದ ಈ ಅಮೃತ ಘಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿ ಆವರಣದ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ ೭೫ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಕಂಡುಬಂತು. ವಂದೇ ಮಾತರಂ ಗಾಯನದ ಬಳಿಕ ಕಾರ್ಯಕ್ರಮದ ಮುಕುಟಕ್ಕೆ ಕಿರೀಟ ಇಟ್ಟಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ‘ಜನ ಗಣ ಮನ’ ಮೊಳಗಿತು. ‘ಕೋಟಿ ಕಂಠೋಂಸೇ ನಿಖ್‌ಲೇ…’ ಗಾನಕ್ಕೆ ಸೇರಿದ್ದ 30 ಸಾವಿರಕ್ಕೂ ಅಧಿಕ ಮಂದಿ ಪುಟಾಣಿಗಳು ಧ್ವಜಗಳನ್ನು ಬೀಸುತ್ತಾ ದನಿಗೂಡಿಸಿದರು. ಅಕ್ಷರಶಃ ಅಮೃತ ಕಾಲವೇ ಅನುರಣಿಸಿತು. ಧ್ವಜಾರೋಹಣ ಮಾಡಿ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ‘ಆಳ್ವಾಸ್ ಮಿನಿಭಾರತ’ ಎಂದು ಬಣ್ಣಿಸಿದರು. ಭಾರತದ ಸಂಸ್ಕೃತಿಯ ಸಾರವನ್ನು ನಾವು ಕರ್ನಾಟಕದಲ್ಲಿ ಕಾಣಬಹುದು. ಆದರೆ, ಕರ್ನಾಟಕದ ಸಾಂಸ್ಕೃತಿಕ ಸಾರವನ್ನು ನಾವೆಲ್ಲ ಆಳ್ವಾಸ್‌ನಲ್ಲಿ ನೋಡಬೇಕು. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ ಎಂದರು.

ರೈತರು, ಶೋಷಿತರು, ಬಡವರು ಸೇರಿದಂತೆ ದೇಶದ ಧ್ವನಿ ರಹಿತರೆಲ್ಲ ಇಷ್ಟೊಂದು ಧೈರ್ಯದಿಂದ ಈ ದೇಶದಲ್ಲಿ ಜೀವಿಸಲು ಕಾರಣವೇ ಡಾ.ಬಿ.ಆರ್. ಅಂಬೇಡ್ಕರ್ ಪ್ರಣೀತ ಸಂವಿಧಾನ ಎಂದರು. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಬಂತು. ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚನೆಯಾಯಿತು. ದೇಶದ ಏಕತೆಯನ್ನು ಸಂವಿಧಾನ ಉಳಿಸಿದೆ. ಪ್ರತಿ ಭಾರತೀಯನೂ ಈ ಸಂವಿಧಾನದ ಇತಿಹಾಸ, ಅರ್ಥ ತಿಳಿದುಕೊಳ್ಳಬೇಕು ಎಂದರು. ಆಳ್ವಾಸ್ ಆವರಣವೇ ಮಿನಿ ಭಾರತದ ಹಾಗಿದೆ. ಪ್ರದೇಶ, ಭಾಷೆ, ಜಾತಿ, ಧರ್ಮಗಳನ್ನು ಮೀರಿ ಎಲ್ಲ ಮಕ್ಕಳು ಒಂದಾಗಿದ್ದೀರಿ. ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ದೇಶ ಬಲಿಷ್ಠವಾಗಲು ಸಾಧ್ಯ. ಅಂತಹ ದೇಶಭಕ್ತಿಯ ಕೆಲಸವನ್ನು ಡಾ.ಎಂ. ಮೋಹನ ಆಳ್ವ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಪ್ರಜಾಪ್ರಭುತ್ವವೇ ದೇಶದ ಸೌಂದರ್ಯ. ನಾವೆಲ್ಲ ಒಗ್ಗಟ್ಟಿನಿಂದ ಇದ್ದರೆ ಮಾತ್ರ ದೇಶವು ಒಂದನೇ ಸ್ಥಾನಕ್ಕೆ ಏರಲು ಸಾಧ್ಯ. ಅದಕ್ಕಾಗಿ ಸಂವಿಧಾನದ ಆಶಯವನ್ನು ಬದುಕಿನಲ್ಲಿ ಪಾಲಿಸಿ. ಒಂದೇ ಮಕ್ಕಳಂತೆ ಬಾಳಿ ಎಂದರು.

ಮಾತು ದೇಶಕ್ಕೆ ಮಾರಕವಾಗದಿರಲಿ. ಸಂವಿಧಾನ ಆಶಯ ಅರಿತು ಬಾಳಿ. ಮಾನವೀಯತೆ ಮತ್ತು ಕರುಣೆ ಅವಶ್ಯ ಎಂದ ಅವರು, ಸ್ವಾಮಿ ವಿವೇಕಾನಂದರು ಹೇಳಿದಂತೆ ನಮ್ಮನ್ನು ಉಡುಗೆ- ತೊಡುಗೆಯ ಬದಲಾಗಿ ಸಂಸ್ಕೃತಿಯು ‘ಜಂಟಲ್ ಮ್ಯಾನ್’ ಮಾಡಬೇಕು. ನಾವೆಲ್ಲ ಲಾಭಕ್ಕಿಂತ ಮೌಲ್ಯಕ್ಕೆ ಒತ್ತು ನೀಡಿ ಬದುಕಬೇಕು ಎಂದರು. ‘ಕುಂಬಳೆಯ ಹಳ್ಳಿಯೊಂದರಲ್ಲಿ ಒಂದು ಬಾರಿ ವಿದೇಶಿ ವ್ಯಕ್ತಿಯೊಬ್ಬ ನಿರ್ಭಯವಾಗಿ ತನ್ನೆಲ್ಲ ಹಣ, ಸರಕು ಸಂಜಾಮು ಹಿಡಿದುಕೊಂಡು ಅಡ್ಡಾಡುತ್ತಿದ್ದನು. ಅದು ದೇಶದ ನಮ್ಮ ದೇಶ ೭೫ ವರ್ಷದಲ್ಲಿ ಸಶಕ್ತವಾಗಿರುವುದಕ್ಕೆ ಇದೇ ಸಾಕ್ಷಿ ಎಂದರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಇಂದ್ರೇಶ್ ಗೌಡ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಬಳಿಕ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಹರ್ಷಾರೆಡ್ಡಿ ನೇತೃತ್ವದಲ್ಲಿ ಗೌರವ ವಂದನೆ ನೀಡಲಾಯಿತು. ಸಿಡಿಮದ್ದು ಸಿಂಚನವು ಗಮನ ಸೆಳೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮಾಜಿ ಸಚಿವರಾದ ಪಿಪಿ.ಜಿ.ಆರ್. ಸಿಂಧ್ಯಾ, ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ಸುಮಾರು ೨೫೦ಕ್ಕೂ ಅಧಿಕ ಮಾಜಿ ಸೈನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!