Thursday, September 19, 2024
Thursday, September 19, 2024

2024 ರಲ್ಲಿ ಮತ್ತೊಮ್ಮೆ ಮೋದಿ ಖಚಿತ: ಶಾಸಕ ಕಾಮತ್

2024 ರಲ್ಲಿ ಮತ್ತೊಮ್ಮೆ ಮೋದಿ ಖಚಿತ: ಶಾಸಕ ಕಾಮತ್

Date:

ಮಂಗಳೂರು, ಜ.31: 2024ರ ಲೋಕಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರ ಸೂಚನೆಯಂತೆ ದೇಶ ರಾಜ್ಯದೆಲ್ಲೆಡೆ ‘ಮತ್ತೊಮ್ಮೆ ಮೋದಿ’ ಗೋಡೆಬರಹ ಅಭಿಯಾನ ಆರಂಭವಾಗಿದ್ದು, ಮಂಗಳೂರಿನಲ್ಲಿ ಈ ಅಭಿಯಾನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು.

ಪ್ರತೀ ಬೂತ್ ಗೆ ಕನಿಷ್ಠ ಐದರಂತೆ ಒಟ್ಟಾರೆಯಾಗಿ 1250ಕ್ಕೂ ಹೆಚ್ಚು ಗೋಡೆಬರಹ ಅಭಿಯಾನ ನಡೆಯಲಿದೆ. ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಸಮಸ್ತ ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು ಮುಂದಿನ ಎರಡೂವರೆ ತಿಂಗಳುಗಳ ಕಾಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾದ
ನಾವೆಲ್ಲರೂ ಹಗಲು ರಾತ್ರಿ ದುಡಿದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಜಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಪಾತ್ರ ನಿರ್ವಹಿಸೋಣ ಎಂದು ಶಾಸಕ ಕಾಮತ್ ಹೇಳಿದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ, ದಕ್ಷಿಣಕನ್ನಡ ಜಿಲ್ಲಾ ಲೋಕಸಭಾ ಚುನಾವಣಾ ಸಂಚಾಲಕರಾದ ನಿತಿನ್ ಕುಮಾರ್, ರೂಪಾ ಡಿ.ಬಂಗೇರ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಲೀಲಾವತಿ, ಗಣೇಶ್ ಕುಲಾಲ್, ಅಶ್ವಿತ್ ಕೊಟ್ಟಾರಿ, ರಮೇಶ್ ಕಂಡೆಟ್ಟು, ಅಜಯ್, ಕಿರಣ್ ರೈ, ಗೋಡೆ ಬರಹ ಅಭಿಯಾನದ ಜಿಲ್ಲಾ ಸಂಚಾಲಕರಾದ ಮಹೇಶ್ ಜೋಗಿ, ಅರ್ಷದ್ ಪೋಪಿ, ವಿನೋದ್ ಮೆಂಡನ್, ರಮೇಶ್ ಹೆಗ್ಡೆ, ಚರಿತ್ ಪೂಜಾರಿ, ಲಲ್ಲೇಶ್, ಅನಿಲ್ ಹೊಯ್ಗೆಬಜಾರ್, ಪೂರ್ಣಿಮಾ ರಾವ್, ಸಚಿನ್, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!