ಮಂಗಳೂರು, ಫೆ.18: ತುಳು ಭಾಷೆಯನ್ನು ಕರ್ನಾಟಕದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಹಾಗೂ ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸಬೇಕೆಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಮೋಹನ್ ಆಳ್ವ ಅವರ ನೇತೃತ್ವದ ಸಮಿತಿಯ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಪಡೆದಿದ್ದು ಕೂಡಲೇ ಪ್ರಸ್ತುತ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಸಚಿವ ಸಂಪುಟದ ಒಪ್ಪಿಗೆ ಪಡೆದು ಸರ್ಕಾರದ ಆದೇಶ ಹೊರಡಿಸಬೇಕೆಂದು ಆಗ್ರಹಿಸಲಾಯಿತು. ಮಾಜಿ ಶಾಸಕ ಮೊಯಿದೀನ್ ಬಾವ, ತುಳುನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.
ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವಂತೆ ಸಿಎಂಗೆ ಮನವಿ

ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವಂತೆ ಸಿಎಂಗೆ ಮನವಿ
Date: