ಉಡುಪಿ, ಮಾ.27: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಜ್ಞಾನಸ್ಪರ್ಧಾ ಸರಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಮಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ. ಸುಮನ ಕಾರ್ಯಕ್ರಮ ಉದ್ಘಾಟಿಸಿದರು. ಎಲ್ಲಾ ಇಲಾಖೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಪ್ರಚಲಿತ ವಿದ್ಯಮಾನಗಳನ್ನು ಹೆಚ್ಚು ತಿಳಿದುಕೊಳ್ಳಬೇಕು. ಕಾಲೇಜಿನ ವಿದ್ಯಾರ್ಥಿಗಳು ಐಎಎಸ್ ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮವಾದಂತಹ ಉದ್ಯೋಗದ ಅವಕಾಶಗಳನ್ನು ಪಡೆದುಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನರು ಹೆಚ್ಚೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದ ಸಂಚಾಲಕ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ಶೇಷಪ್ಪ ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಧ್ಯಕ್ಷತೆಯನ್ನು ಐಕ್ಯೂಎಸಿಯ ಸಂಯೋಜಕರಾದ ಚೇತನ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲಿಕ್ಕೆ ಮತ್ತು ಬೇರೆಬೇರೆ ಅವಕಾಶಗಳನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಮಂಜು ಸನಾದಿ ವಂದಿಸಿದರು. ವಿದ್ಯಾರ್ಥಿನಿ ಸಫೀದ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವತ್ಸಲ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ಅಧಿಕಾರಿಗಳಾದ ಶೋಭಾಮಣಿ, ಕನ್ನಡ ಉಪನ್ಯಾಸಕರಾದ ಉಮಾಕಾಂತ್ ಉಪಸ್ಥಿತರಿದ್ದರು.