Home ಸುದ್ಧಿಗಳು ಪ್ರಾದೇಶಿಕ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

123
0

ಮಂಗಳೂರು, ಮೇ 7: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎಡಪದವಿನ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋಪಾಲ ಕಾರಂತ ಅವರು ಉದ್ಘಾಟಿಸಿ, ಶುಭಹಾರೈಸಿದರು. ಖ್ಯಾತ ನ್ಯಾಯವಾದಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯ ವಿಜಯ್ ಗೌಡ ಶಿಬ್ರಿಕೆರೆ ಶ್ರಮದಾನಕ್ಕೆ ಚಾಲನೆ ನೀಡಿದರು. ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕ ವಿಭಾಗದ ಮುಖ್ಯ ಶೈಕ್ಷಣಿಕ ಸಂಯೋಜಕರಾದ ಪ್ರೊ. ವಸಂತಿ ಪಿ. ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜೈನ್ ಕಾಲೇಜಿನ ದೈಹಿಕ ಶಿಕ್ಷಣದ ಉಪನ್ಯಾಸಕರಾದ ನವೀನ್ ಎಂ. ಹೆಗ್ಡೆ ಅವರು ಎನ್‌ಎಸ್‌ಎಸ್‌ನಲ್ಲಿನ ತಮ್ಮ ಅನುಭವಗಳೊಂದಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ಅವರು ಅಧ್ಯಕ್ಷತೆ ವಹಿಸಿದ್ದರು. ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಆಡಳಿತಾಧಿಕಾರಿ ಪ್ರೇಮನಾಥ ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಗಾಯತ್ರಿ, ಕಾಲೇಜಿನ ಮುಖ್ಯೋಪಾದ್ಯಾಯರಾದ ಸುಬ್ರಹ್ಮಣ್ಯ ಮೊಗೆರಾಯ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಡಾ. ಲೋಕೇಶ್‌ನಾಥ್ ಸ್ವಾಗತಿಸಿ, ಡಾ. ಮೋಹನ್‌ದಾಸ್ ವಂದಿಸಿ, ಶಾಂತಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.