Monday, November 25, 2024
Monday, November 25, 2024

ಕಲಿಕೆಯ ಜತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಅಜಿತ್ ಪೈ

ಕಲಿಕೆಯ ಜತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಅಜಿತ್ ಪೈ

Date:

ಮಂಗಳೂರು, ಮೇ 9: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ, ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು. ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕ, ಬ್ಯಾಂಕಿಂಗ್ ಇನ್ನಿತರ ರಂಗಗಳಲ್ಲಿ ಮೇರು ಸಾಧನೆ ಮಾಡುವಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ, ಉಳ್ಳಾಲ ಶ್ರೀನಿವಾಸ ಮಲ್ಯ, ಟಿ.ಎಂ.ಎ.ಪೈ ಹೀಗೆ ಅನೇಕ ಸಾಧಕರ ಕೊಡುಗೆಯಿದೆ. ಈ ಹಾದಿಯಲ್ಲಿ ಇನ್ನಷ್ಟು ಬೆಳೆಯುತ್ತಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಪ್ರಗತಿಯ ಬಗ್ಗೆ ಹೆಮ್ಮೆ ಅನಿಸಿದೆ ಎಂದವರು ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶಿಕ್ಷಣದ ಜತೆಗೆ ಸೃಜನ ಶೀಲ ಚಿಂತನೆ, ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ ಕೆನರಾ ಶಿಕ್ಷಣ ಸಂಸ್ಥೆಗಳು ಮೌಲ್ಯಗಳ ಜತೆಗೆ ನಿರಂತರ ಪ್ರಗತಿ, ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಕಾರ್ಯ ಯೋಜನೆಯಲ್ಲಿ ಯಶಸ್ಸು ಕಾಣುತ್ತಿರುವುದರ ಹಿಂದೆ ಟೀಂ ವರ್ಕ್ ಕೊಡುಗೆಯಿದೆ ಎಂದರು. ಪ್ರಾಂಶುಪಾಲ ಡಾ. ನಾಗೇಶ್ ಹೆಚ್.ಆರ್. ವಾರ್ಷಿಕ ವರದಿ ವಾಚಿಸಿದರು. ಉಪ ಪ್ರಾಂಶುಪಾಲ ಡಾ. ಡೇಮಿಯನ್ ಎ. ಡಿಮೆಲ್ಲೋ, ಅತಿಥಿಯನ್ನು ಪರಿಚಯಿಸಿ ಸ್ವಾಗತಿಸಿದರು. ಪ್ರತಿಭಾನ್ವಿತರು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಿದ್ಧಾರ್ಥ ಕಿಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈವಂದಿಸಿದರು. ವಿದ್ಯಾರ್ಥಿನಿ ಶ್ವೇತಾ ಬಾಳಿಗಾ ಕಾರ್ಯಕ್ರಮ ನಿರೂಪಿಸಿದರು.

ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ಕೆ.ಸುರೇಶ್ ಕಾಮತ್, ಉಪ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್, ಸದಸ್ಯ ಶಿವಾನಂದ ಶೆಣೈ, ಆಡಳಿತ ಕೌನ್ಸಿಲ್ ಸದಸ್ಯ ವಿನಾಯಕ್ ಕಾಮತ್, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈ, ಉಪಾಧ್ಯಕ್ಷೆ ಶಿವಾಲಿ, ಕಾರ್ಯದರ್ಶಿ ಮಹೇಶ್ ಪೈ, ಜತೆ ಕಾರ್ಯದರ್ಶಿ ಆದಿತ್ಯ ಭಕ್ತ, ಸಮನ್ವಯಕಾರರಾದ ವರ್ಷಿಣಿ, ನಾಗರಾಜ್, ರಕ್ಷಾ, ಆದರ್ಶ್, ಸಂಜನಾ, ಮೇಘ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!