Wednesday, September 9, 2026
Wednesday, September 9, 2026

ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವಲ್ಲಿ ಪುನರೂರು ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ: ಜನಾರ್ದನ್ ಕೊಡವೂರು

ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವಲ್ಲಿ ಪುನರೂರು ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ: ಜನಾರ್ದನ್ ಕೊಡವೂರು

Date:

ಮಂಗಳೂರು: ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರಹಾಕಲು ಸತತ ಐದು ವರ್ಷಗಳಿಂದ ಪುನರೂರು ಪ್ರತಿಷ್ಠಾನವು ಪ್ರತಿಭಾ ಸೌರಭದ ಮೂಲಕ ಪ್ರೌಢಶಾಲಾ ಮಕ್ಕಳಿಗೆ ಅವಕಾಶ ನೀಡುತ್ತಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದೊಂದು ವರದಾನವಾಗಿದೆ ಎಂದು ಉಡುಪಿ ವಲಯದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಜನಾರ್ದನ್ ಕೊಡವೂರು ಹೇಳಿದರು.

ಪುನರೂರು ಪ್ರತಿಷ್ಠಾನ(ರಿ.) ಇದರ ಆಶ್ರಯದಲ್ಲಿ ಹಾಗೂ ಜನವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೂತ್ಸಾಹಿಸುವ ಸಲುವಾಗಿ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಂಗಣದಲ್ಲಿ ಜರುಗಿದ ಪ್ರತಿಭಾ ಸೌರಭ- 2021ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುನರೂರು ಪ್ರತಿಷ್ಠಾನ(ರಿ.) ಇದರ ಗೌರವಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಅಧಕ್ಷತೆ ವಹಿಸಿದ್ದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಅರ್ಚಕರಾದ ಗೋಪಾಲಕೃಷ್ಣ ಆಸ್ರಣ್ಣರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾದ ಕೊಡೆತ್ತೂರು ಭುವನಾಭಿರಾಮ ಉಡುಪ, ಕರ್ನಾಟಕ ಬ್ಯಾಂಕ್ ಕಟೀಲು ಶಾಖೆಯ ಶಾಖಾ ಪ್ರಬಂಧಕರಾದ ಮಿಥುನ್ ಆಚಾರ್ಯ, ಪುನರೂರು ಪ್ರತಿಷ್ಠಾನ(ರಿ.) ಇದರ ಗೌರವಾಧ್ಯಕ್ಷರಾದ ಎಚ್.ಕೆ ಉಷಾರಾಣಿ, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಮುಲ್ಕಿಯ ಅಧ್ಯಕ್ಷರಾದ ಪ್ರಾಣೇಶ್ ಭಟ್ ದೇಂದಡ್ಕ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನ(ರಿ.) ಅಧ್ಯಕ್ಷರಾದ ದೇವಪ್ರಸಾದ್ ಪುನರೂರು ಪ್ರಾಸ್ತಾವಿಸಿ, ಸ್ವಾಗತಿಸಿದರು. ಜನವಿಕಾಸ ಸಮಿತಿ ಮೂಲ್ಕಿಯ ಪ್ರಧಾನ ಕಾರ್ಯದರ್ಶಿ ದಾಮೋದರ ಶೆಟ್ಟಿ ಕೊಡೆತ್ತೂರು ವಂದಿಸಿದರು. ಜಿತೇಂದ್ರ ವಿ.ರಾವ್ ಹೆಜಮಾಡಿ ನಿರೂಪಿಸಿದರು.

ಮೂಲ್ಕಿ ಹೋಬಳಿಯ ಒಟ್ಟು 25 ಪ್ರೌಢಶಾಲೆಯ 486 ವಿದ್ಯಾರ್ಥಿಗಳು ಭಾಷಣ, ಪ್ರಬಂಧ, ಚಿತ್ರಕಲೆ ಹಾಗೂ ಕಸದಿಂದರಸ ಸ್ಪರ್ಧೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!