Monday, January 20, 2025
Monday, January 20, 2025

ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ರೂಪಿಸುವ ಅಗತ್ಯತೆಯಿದೆ: ಡಾ. ಎಸ್. ಆರ್. ಹರೀಶ್ ಆಚಾರ್ಯ

ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ರೂಪಿಸುವ ಅಗತ್ಯತೆಯಿದೆ: ಡಾ. ಎಸ್. ಆರ್. ಹರೀಶ್ ಆಚಾರ್ಯ

Date:

ಮಂಗಳೂರು, ಮೇ 31: ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿ ಹಾಗೆಯೇ ಉಳಿದುಕೊಂಡಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ. ಖಾಸಗಿ ಶಾಲಾ -ಕಾಲೇಜು/ ಸರಕಾರಿ ಶಾಲಾ-ಕಾಲೇಜು/ ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ ಶಿಕ್ಷಣ ಹಾಗೂ ಕಲಾ ಮತ್ತು ಕಸೂತಿ ಶಿಕ್ಷಕರ ಸಮಸ್ಯೆಗಳು, ವಸತಿ ಶಾಲಾ ಶಿಕ್ಷಕರ ಸಮಸ್ಯೆಗಳು, ಭಡ್ತಿ ಹೊಂದಿದ ಶಿಕ್ಷಕರ ಸಮಸ್ಯೆಗಳು, ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರ ಸಮಸ್ಯೆಗಳು, ಪಿಂಚಣಿಯ ಸಮಸ್ಯೆ, ಭರ್ತಿಯಾಗದೆ ಖಾಲಿ ಇರುವ ಶಿಕ್ಷಕ ಹುದ್ದೆಗಳ ಸಮಸ್ಯೆಗಳು, ಪರೀಕ್ಷಾ ಹಾಗೂ ಮೌಲ್ಯಮಾಪನ ಕಾರ್ಯನಿರ್ವಹಣಾ ಸಮಸ್ಯೆಗಳು ಇವೇ ಇತ್ಯಾದಿ ವಿಷಯಗಳು ಯಾವುದೇ ಪರಿಹಾರವನ್ನು ಕಾಣದೆ, ಪರಿಹಾರಗೊಳ್ಳುವ ನಿರೀಕ್ಷೆಯೂ ಇಲ್ಲದೆ ಹಾಗೆಯೇ ಮುಂದುವರಿಯುತ್ತಿದೆ. ಇದಕ್ಕೆಲ್ಲ ಮೂಲ ಕಾರಣ ರಾಜ್ಯದ ಪ್ರಸ್ತುತ ಕರ್ನಾಟಕ ನಾಗರಿಕ ಸೇವಾ ಅಧಿನಿಯಮ. ಇದು ಶಿಕ್ಷಕರ ಸಮಸ್ಯೆಗಳನ್ನು ಎದುರಿಸುವಲ್ಲಿ ಅತ್ಯಂತ ದುರ್ಬಲವಾಗಿದೆ. ಆದುದರಿಂದ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ. ಇದನ್ನು ಎಲ್ಲಾ ಶಿಕ್ಷಕ ಸಂಘಟನೆಗಳ ಪ್ರಮುಖರು, ಶಿಕ್ಷಣ ತಜ್ಞರು ಹಾಗೂ ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಂಡು ವಿಧಾನ ಪರಿಷತ್ ನ ಮುಂದಿನ ಅಧಿವೇಶನದಲ್ಲಿ ಖಾಸಗಿ ಮಸೂದೆಯಾಗಿ ಮಂಡಿಸುತ್ತೇನೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಎಸ್. ಆರ್. ಹರೀಶ್ ಆಚಾರ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹಿಡಿದು ಸ್ನಾತಕೋತ್ತರ ಪದವಿ ಶಿಕ್ಷಕರ ವೃತ್ತಿಯು ಇತರ ಸೇವಾ ವೃತ್ತಿಗಳಿಗಿಂತ ಭಿನ್ನವಾದುದಾಗಿದೆ. ಅವರು ಯಂತ್ರ ಅಥವಾ ಫೈಲುಗಳೊಂದಿಗೆ ಕೆಲಸ ಮಾಡುತ್ತಿಲ್ಲ. ಬೋಧನೆ ಮತ್ತು ಬೋಧನಾ ಪೂರಕ ಚಟುವಟಿಕೆಗಳ ಮೂಲಕ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯ ಮಹತ್ವದ ಕಾರ್ಯವನ್ನು ಅವರು ನಿರ್ವಹಿಸುತ್ತಿದ್ದಾರೆ. ಪುಟ್ಟ ಕಂದಮ್ಮಗಳಿಂದ ಹಿಡಿದು ಯುವ ಮನಸ್ಸುಗಳನ್ನು ಬೆಸೆಯುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಸೇವಾ ಕಾರ್ಯವು ಇತರ ಸೇವೆ ಮತ್ತು ವೃತ್ತಿ ಕಾರ್ಯಗಳಿಗಿಂತ ಸಂಪೂರ್ಣ ಭಿನ್ನವೇ ಆಗಿದೆ‌. ಈ ದೃಷ್ಟಿಯಿಂದ ಶಿಕ್ಷಕ ವೃತ್ತಿಯನ್ನು ಭಿನ್ನವಾಗಿ ಪರಿಗಣಿಸಿ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆಯನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ, ಜ.20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ...

ಸಂಸ್ಕಾರಭರಿತ ಶಿಕ್ಷಣಕ್ಕೆ ಸೇವಾ ಸಂಗಮದ ಕಾರ್ಯ ಶ್ಲಾಘನೀಯ: ಕೆ.ಅನಂತಪದ್ಮನಾಭ ಐತಾಳ್

ಕೋಟ, ಜ.20: ಸೇವಾ ಸಂಗಮ ಶಿಶು ಮಂದಿರ ಸಂಸ್ಕಾರಭರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ....

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...
error: Content is protected !!