Monday, February 24, 2025
Monday, February 24, 2025

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ

Date:

ಉಡುಪಿ, ಜೂ. 25: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗಪುರಸ್ಕಾರ’ -2024 ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತ ರಚನೆಕಾರ. ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯು, ಸರದಾರನ ಸ್ವಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, ಮಿನುಗೆಲೆ ಮಿನುಗೆಲೆ ನಕ್ಷತ್ರ, ವ್ಯೂಹ, ಮರಗಿಡಬಳ್ಳಿ, ಪರಶುರಾಮ, ಛತ್ರಪತಿ ಶಿವಾಜಿ, ನೆಮ್ಮದಿ ಅಪಾರ್ಟ್‌ಮೆಂಟ್ ಬ್ಲಾಕ್ ಬಿ ಇತ್ಯಾದಿ ನಾಟಕಗಳನ್ನು ಬರೆದಿದ್ದಾರೆ.

ಪೊಸ ಒಸರ್, ಪರ್ಂದ್ ಪೆಲಕಾಯಿ, ಬರ್ಬರೀಕ, ಪಿಲಿತ ಪಂಜ, ಬಿಂಬದುಲಾಯಿದ ಬಿಂಬ, ಮಾಲೆ ಪಟಾಕಿ, ಪುದ್ದು ಕೊಡ್ತರ್ ಇತ್ಯಾದಿ ತುಳು ಪುಸ್ತಕಗಳನ್ನು ರಚಿಸಿದ್ದಾರೆ.

ಧಾರವಾಡದ ದ.ರಾ.ಬೇಂದ್ರೆ ಪ್ರಶಸ್ತಿ, ಫ.ಶಿ.ಭಾಂಡಗೆ ಪ್ರಶಸ್ತಿ, ರಂಗಭೂಮಿ ನಾಟಕ ರಚನಾ ಪ್ರಶಸ್ತಿ, ಎರಡು ಬಾರಿ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎರಡು ಸಲ ರತ್ನವರ್ಮ ಹೆಗ್ಗಡೆ ನಾಟಕ ರಚನಾ ಪ್ರಶಸ್ತಿಗಳನ್ನು ಪಡೆದಿರುತ್ತಾರೆ ಎಂದು ನಮ ತುಳುವೆರ್ ಕಲಾ ಸಂಘಟನೆ (ರಿ) ಇದರ ಅಧ್ಯಕ್ಷರಾದ ಸುಕುಮಾರ್ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!